ಮಂಡ್ಯ : ನೆನ್ನೆ ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶ ಮುಗಿಸಿ ವಾಪಾಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತವಾಗಿದ್ದು. ಬೈಕ್ ಸವಾರ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ದೊರೆತಿದೆ.
ಹಾಸನದ ಜನಕಲ್ಯಾಣ ಸಮಾವೇಶಕ್ಕೆ ತೆರಳಿದ್ದ ಜನರನ್ನು ವಾಪಾಸ್ ಕರೆತರುತ್ತಿದ್ದ ಸರ್ಕಾರಿ ಕೆಎಸ್ಆರ್ಟಿಸಿ ಬಸ್ಗೆ ಬೈಕ್ ಗುದ್ದಿ ಅಪಘಾತ ಸಂಭವಿಸಿದ್ದು. K.R ಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು. K.R ಪೇಟೆಯ ದುಡುಕನಹಳ್ಳಿ ಗ್ರಾಮದ ಜನರನ್ನು ಇಳಿಸಿ ಬರುವಾಗ ಬೆಂಗಳೂರು-ಜಲಸೂರು ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು. ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ 27 ವರ್ಷದ ಪವನ್ ಎಂಬುವವರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ದೊರೆತಿದೆ. ಸ್ಥಳಕ್ಕೆ ಕೆ.ಆರ್ ಪೇಟೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮಾಹಿತಿ ದೊರೆತಿದೆ.