ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು. ಕಾರಿನಲ್ಲಿದ್ದ ಐವರು ಇಂಜಿನಿಯರಿಂಗ್ ವಿಧ್ಯಾರ್ಥಿಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು. ಮೂವರಿಗೆ ಗಾಯವಾಗಿದೆ ಎಂದು ಮಾಹಿತಿ ದೊರೆತಿದೆ.
ಹಾಸನ ಜಿಲ್ಲೆಯ, ಚನ್ನರಾಯಪಟ್ಟಣ ತಾಲ್ಲೂಕಿನ, ಗೌಡಗೆರೆ ಸಮೀಪ ಘಟನೆ ನಡೆದಿದೆ. ಐವರು ಇಂಜಿನಿಯರಿಂಗ್ ವಿಧ್ಯಾರ್ಥಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಮಾಹಿತಿ ದೊರೆತಿದೆ. KA-17-Z-2236 ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಧ್ಯಾರ್ಥಿಗಳು ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅತಿ ವೇಗವಾಗಿ ಕಾರು ಚಲಾಯಿಸುತ್ತಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಸೂರಜ್ (19), ಅನೀಶ್ (18) ಮೃತರಾಗಿದ್ದು. ಉಳಿದ ವಿಶಾಲ್ (19), ಪೂರ್ಣಚಂದ್ರ (18) ಎಂಬುವವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಮಾಹಿತಿ ದೊರೆತಿದೆ. ಆದರೆ ಭುವನ್ ಎಂಬ ವಿಧ್ಯಾರ್ಥಿಗೆ ಗಂಭೀರ ಗಾಯವಾಗಿದ್ದು ಆತನನ್ನು BGS ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲು ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ.
ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ವೀಕೆಂಡ್ ಹಿನ್ನಲೆ ಬೆಂಗಳೂರು ಮೂಲದ ವಿಧ್ಯಾರ್ಥಿಗಳು ಮಂಗಳೂರಿಗೆ ರಜೆ ಕಳೆಯಲು ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.
ಮಾನವೀಯತೆ ಮೆರೆದ ಶಾಸಕ ಸಿ.ಎನ್ ಬಾಲಕೃಷ್ಣ !
ಇದೇ ವೇಳೆ ಚನ್ನರಾಯಪಟ್ಟಣಕ್ಕೆ ತೆರಳುತ್ತಿದ್ದ ಶಾಸಕ ಸಿ.ಎನ್.ಬಾಲಕೃಷ್ಣ ಅಪಘಾತ ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿದ್ದಾರೆ. ಗಾಯಾಳುಗಳನ್ನು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿದ್ದಾರೆ. ಗಾಯಾಳುಗಳ ಜೊತೆಗೆ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.