ಹುಬ್ಬಳ್ಳಿ : ಮಧ್ಯರಾತ್ರಿ ವೇಳೆ ಮನೆಗೆ ನುಗ್ಗಿ ಹಣ, ಮಹಿಳೆಯರ ಒಳಉಡುಪುಗಳನ್ನು ಕದಿಯುತ್ತಿದ್ದ ಕಳ್ಳನನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗ ತಳಿಸಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದ್ದು. ಸೈಕೋ ಕಳ್ಳನನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಾಮಾನ್ಯವಾಗಿ ಕಳ್ಳ ಎಂದರೆ ಮನೆಗೆ ನುಗ್ಗಿ ಚಿನ್ನಾಭರಣ, ಹಣವನ್ನು ದೋಚುವುದನ್ನು ಕಂಡಿರುತ್ತೇವೆ. ಆದರೆ ಇಲ್ಲೋಬ್ಬ ಸೈಕೋ ಕಳ್ಳ ಮಧ್ಯರಾತ್ರಿ ವೇಳೆ ಮನೆಗೆ ನುಗ್ಗಿ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡಿದ್ದು. ಕಳ್ಳ ಮನೆಗೆ ಪ್ರವೇಶಿಸುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳ್ಳನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗವಾಗಿ ತಳಿಸಿದ್ದು. ಕಳ್ಳನನ್ನು ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಪೋಲಿಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.