ಚಿಕ್ಕಮಗಳೂರು: ಅಕ್ರಮ ಸಂಬಂಧಕ್ಕೆ ಯುವತಿಯೊಬ್ಬಳ ಹತ್ಯೆಯಾಗಿದ್ದು. ತನ್ನ ಬಿಟ್ಟು ಗಂಡನ ಜೊತೆ ಹೋದ ಗೃಹಿಣಿಯನ್ನು ಪ್ರಿಯಕರ ಚಿರಂಜೀವಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೊಲೆಯಾದ ಯುವತಿಯನ್ನು ತೃಪ್ತಿ ಎಂದು ಗುರುತಿಸಲಾಗಿದೆ.
ತೃಪ್ತಿ ಮತ್ತು ಚಿರಂಜೀವಿ ಫೇಸ್ಬುಕ್ ಮೂಲಕ ಪರಿಚಯವಾಗಿ ಬಳಿಕ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಒಂದು ತಿಂಗಳ ಹಿಂದೆ ಪತಿ ರಾಜು ಬಿಟ್ಟು ಪ್ರಿಯಕರನ ಜೊತೆ ತೃಪ್ತಿ ನಾಪತ್ತೆಯಾಗಿದ್ದರು. ಈ ಬಗ್ಗೆ ಬಾಳೆಹೊನ್ನೂರು ಠಾಣೆಯಲ್ಲಿ ನಾಪತ್ತೆ ಕೇಸ್ ಕೂಡ ದಾಖಲಾಗಿತ್ತು.
ಬಿಜಾಪುರದಲ್ಲಿ ತಲೆಮರೆಸಿಕೊಂಡಿದ್ದ ತೃಪ್ತಿ ಮತ್ತು ಪ್ರಿಯಕರ ಚಿರಂಜೀವಿಯನ್ನು ಪೊಲೀಸರು ಹುಡುಕಿ ಕರೆತಂದಿದ್ದರು. ಪೋಷಕರ ಸಂಧಾನದ ಬಳಿ ಪತಿ ರಾಜುವಿನ ಜೊತೆ ತೃಪ್ತಿ ತೆರಳಿದ್ದಾರೆ. ಇದರಿಂದ ಕುಪಿತಗೊಂಡ ಚಿರಂಜೀವಿ ತೃಪ್ತಿಯನ್ನು ಹತ್ಯೆ ಮಾಡಿ ಬಳಿಕ ಕೃಷಿ ಹೊಂಡಕ್ಕೆ ಎಸೆದು ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.