Wednesday, December 25, 2024

ಬ್ರೇಕ್​ಫೇಲ್​ ಆಗಿ ಡಿವೈಡರ್​ಗೆ ಡಿಕ್ಕಿ ಹೊಡೆದ ಖಾಸಗಿ ಬಸ್ !

ಹಾಸನ: ಬ್ರೇಕ್​​ ಫೇಲ್​ ಆದ ಖಾಸಗಿ ಬಸ್​​ ರಸ್ತೆ ಬದಿಯಲ್ಲಿನ ಡಿವೈಡರ್​ಗೆ ಡಿಕ್ಕಿಯಾಗಿದ್ದು. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮಾಹಿತಿ ದೊರೆತಿದೆ.

ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದ, ಮಳಲಿ ಬೈಪಾಸ್ ರಸ್ತೆಯಲ್ಲಿ ಘಟನೆ ನಡೆದಿದ್ದು. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೆ ಈಡಾಗಿದೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿ 75ರ ಮಳಲಿ  ಬೈಪಾಸ್​​ನಲ್ಲಿ ಬಸ್​ನ ಬ್ರೇಕ್​ ಫೇಲ್​ ಆಗಿ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಯುವತಿ ಮೇಲೆ ಹಲ್ಲೆ ಮಾಡಿ ಪೋಲಿಸರ ಅಥಿತಿಯಾದ ಭೂಪ !

ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಬಸ್​ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಕ್ರಾಫರ್ಡ್​ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ  ಸಕಲೇಶಪುರ ನಗರ ಪೋಲಿಸ್​ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮಾಹಿತಿ ದೊರೆತಿದೆ.

RELATED ARTICLES

Related Articles

TRENDING ARTICLES