ಕಾರವಾರ : ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದ್ದು. ಬಸ್ನಲ್ಲಿದ್ದ 40ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗಾದ ಸೇಂಟ್ ಅಂತೋನಿ ಪ್ರೌಢ ಶಾಲೆಯ ವಿಧ್ಯಾರ್ಥಿಗಳು ಪ್ರವಾಸಕ್ಕೆಂದು ಉತ್ತರಕನ್ನಡಕ್ಕೆ ಬಂದಿದ್ದ ವೇಳೆ ಘಟನೆ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶಗುಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದ್ದು. ಬಸ್ನಲ್ಲಿದ್ದ ಸುಮಾರು 40 ವಿಧ್ಯಾರ್ಥಿಗಳಿಗೆ ಗಾಯವಾಗಿದೆ ಎಂದು ಮಾಹಿತಿ ದೊರೆತಿದೆ.
ಬಸ್ನಲ್ಲಿ ಸುಮಾರು 60 ವಿಧ್ಯಾರ್ಥಿಗಳು ಪ್ರಯಾನಿಸುತ್ತಿದ್ದರು ಎಂದು ತಿಳಿದು ಬಂದಿದ್ದು. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಜೋಯಿಡಾ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.