ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ ಹಿನ್ನಲೆ ನಾಳೆ(ಡಿ.11) ರಾಜ್ಯದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ದೊರೆತಿದೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ, ನವ ಬೆಂಗಳೂರಿನ ಹರಿಕಾರ ಎಸ್.ಎಂ ಕೃಷ್ಣ ಇಂದು ಮಧ್ಯರಾತ್ರಿ 3 ಗಂಟೆ ಸುಮಾರಿಗೆ ನಿಧನರಾಗಿದ್ದು. ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಪ್ರಮುಖ ಕೊಂಡಿ ಕಳಚಿದಂತಾಗಿದೆ. ಇವರ ಅಂತ್ಯಸಂಸ್ಕಾರ ನಾಳೆ ಸಂಜೆ ಮಂಡ್ಯದ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಮಾಹಿತಿ ದೊರೆತಿದೆ.
ಇದರ ಹಿನ್ನಲೆ ನಾಳೆ(ಡಿ.11) ರಾಜ್ಯದ್ಯಂತ ಸರ್ಕಾರಿ ರಜೆ ಘೊಷಣೆ ಮಾಡಿದ್ದು. ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ದೊರೆತಿದೆ. ಇದರ ಜೊತೆಗೆ ರಾಜ್ಯದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾದ್ಯಮಕ್ಕೆ ತಿಳಿಸಿದ್ದಾರೆ.