ದೆಹಲಿ : ರಾಜಕಾರಣಿ, ಕರ್ನಾಟಕದ ಮಾಜಿ ಸಿಎಂ ಎಸ್‌ಎಂ.ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಸದಾಶಿವನಗರದ ನಿವಾಸದಲ್ಲಿ ನಿಧನರಾಗಿದ್ದಾರೆ. ಕೃಷ್ಣ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿತ ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡಿರುವ ನಾಯಕರು ಕಂಬನಿ ಮಿಡಿದಿದ್ದಾರೆ.
ದೇಶ ಕಂಡ ಸಜ್ಜನ ರಾಜಕಾರಣಿ, ಕರ್ನಾಟಕದ ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಸದಾಶಿವನಗರದ ನಿವಾಸದಲ್ಲಿ ನಿಧನರಾಗಿದ್ದಾರೆ. ದೇಶದ ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಇಂದು ಬೆಳಗ್ಗೆ ಸಾಮಾಜಿಕ ಜಾಲತಾಣ ಖಾತೆ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಶ್ರೀ ಎಸ್.ಎಂ ಕೃಷ್ಣ ಅವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೆ ಶ್ರಮಿಸಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದನ್ನು ಸ್ಮರಿಸಿಕೊಳ್ಳಲಾಗುತ್ತದೆ ಶ್ರೀ ಎಸ್.ಎಂ ಕೃಷ್ಣ ಅವರು ಸಮೃದ್ಧ ಓದುಗ ಮತ್ತು ಚಿಂತಕರೂ ಆಗಿದ್ದರು’ ಎಂದು ಟ್ವೀಟ್ ಮಾಡಿದ್ದಾರೆ.