ಚೆನೈ : ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು ಪುದುಚೇರಿಯ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮುಂದಿನ ನಾಲೈದು ದಿನ ಪುದುಚೇರಿ ಮತ್ತು ತಮಿಳುನಾಡಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ನಾಗರಿಕರು ಎಚ್ಚರಿಕೆಯಿಂದ ಇರಬೇಕು ಎಂದು ಚೆನ್ನೈ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಚೆನೈ ಮತ್ತು ಪಾಂಡಿಚೇರಿಯ ಕೆಲವು ಪ್ರದೇಶಗಳಲ್ಲಿ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು. ಡಿಸೆಂಬರ್ 13 ಮತ್ತು 14ರಂದು ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯು ಭಾರ ಕುಸಿತ ಕರ್ನಾಟಕದಲ್ಲಿಯೂ ಪರಿಣಾಮ ಬೀರಲಿದೆ ಎಂದು ಮಾಹಿತಿ ದೊರೆತಿದೆ.
ತಮಿಳುನಾಡು ಮತ್ತು ಪಾಂಡಿಚೇರಿಯಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ದೊರೆತಿದ್ದು. ಇದರ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದಾರೆ ಎಂದು ಮಾಹಿತಿ ದೊರೆತಿದೆ.