ಕೆನಡಾ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ ಮತ್ತು ದೌರ್ಜನ್ಯ ನಿಲ್ಲಿಸಬೇಕು ಎಂದು ಆಗ್ರಹಿಸಿ ಕೆನಡಾದಲ್ಲಿ ನೆಲೆಸಿರುವ ಹಿಂದೂ ಸಮುದಾಯದವರು ಬುಧವಾರ ಬೆಳಗ್ಗೆ ಪ್ರತಿಭಟನೆ ನಡೆಸಿದರು. ಟೊರೊಂಟೊದ ಬಾಂಗ್ಲಾದೇಶ ರಾಯಭಾರಿ ಕಚೇರಿ ಎದುರು ನೂರಾರು ಸಂಖ್ಯೆಯಲ್ಲಿ ಸೇರಿದ್ದ ಹಿಂದೂಗಳು ಪ್ರತಿಭಟನೆ ನಡೆಸಿದರು.
ನಾವು ಕೆನಡಾದ ಹಿಂದೂಗಳು, ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಇಲ್ಲಿ ಪ್ರತಿಭಟನೆ ಮಾಡಲು ಬಂದಿದ್ದೇವೆ. ಕಳೆದ ಆಗಸ್ಟ್ ತಿಂಗಳಲ್ಲಿ ಬಾಂಗ್ಲಾದಲ್ಲಿ ಏನಾಗಿದೆ ಎಂಬುದನ್ನು ನಾವು ನೋಡಿದ್ದೇವೆ.
ಬಾಂಗ್ಲಾದೇಶವು ಅಲ್ಪಸಂಖ್ಯಾತರು, ಹಿಂದೂಗಳ ಕೊಲ್ಲುವುದನ್ನು ನಿಲ್ಲಿಸಬೇಕು ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ಈಗಾಗಲೇ ನಾವು ನಾವು ಅಫ್ಘಾನಿಸ್ತಾನ, ಪಾಕಿಸ್ತಾನದಿಂದ ನಾಪತ್ತೆಯಾಗಿದ್ದೇವೆ. ಈಗ ನಮ್ಮನ್ನು ಉಳಿಸದಿದ್ದರೆ, ನಾವು ಬಾಂಗ್ಲಾದೇಶದಿಂದಲೂ ನಾಪತ್ತೆಯಾಗುತ್ತೇವೆ. ಅದು ನಮ್ಮ ಭೂಮಿ, ನಮ್ಮ 14 ತಲೆಮಾರುಗಳು ಅಲ್ಲಿ ಹುಟ್ಟಿದ್ದವು ಎಂದು ಬಾಂಗ್ಲಾ ದೇಶದ ಮಹಿಳೆಯೊಬ್ಬರು ತಿಳಿಸಿದ್ದಾರೆ.