ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣರವರು ಪಂಚಭೂತಗಳಲ್ಲಿ ಲೀನರಾಗಿದ್ದು. ಅವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿ ಪರಿಣಮಿಸಿದೆ.
ಮಂಡ್ಯದ ಸೋಮನಹಳ್ಳಿಯಲ್ಲಿ ಎಸ್ಎಂ. ಕೃಷ್ಣರ ಅಂತ್ಯಕ್ರಿಯೆ ನೆರವೇರಿದ್ದು. ಒಕ್ಕಲಿಗ ಸಂಪ್ರದಾಯದಂತೆ ವಿಧಿವಿಧಾನಗಳನ್ನು ನೆರವೇರಿಸಿ ಅವರ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಷ ಮಾಡುವ ಮೂಲಕ ಅಂತಿಮ ಸಂಸ್ಕಾರ ನೆರವೇರಿದೆ. ಈ ವೇಳೆ ಡಿ.ಕೆ ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿ ಭಾವುಕರಾಗಿದ್ದು. ಎಸ್ಎಂ ಕೃಷ್ಣರ ಪಾರ್ಥಿವ ಶರೀರದ ಮುಂದೆ ಗಳಗಳನೆ ಅತ್ತಿದ್ದಾರೆ.
ಇನ್ನು ಎಸ್.ಎಂ ಕೃಷ್ಣರನ್ನು ಪಲ್ಲಕ್ಕಿಯ ಮೇಲೆ ಮೆರವಣಿಗೆ ಮಾಡುವ ವೇಳೆ ಡಿ,ಕೆ ಶಿವಕುಮಾರ್ ಅವರು ತಮ್ಮ ಪ್ರೀತಿಯ ಗುರುಗಳಿಗೆ ಹೆಗಲು ಕೊಟ್ಟು. ಅಂತಿಮ ನಮನ ಸಲ್ಲಿಸಿದರು.