ಹೈದರಾಬಾದ್ : ಪುಷ್ಪ 2 ಚಿತ್ರ ಪ್ರದರ್ಶನದ ವೇಳೆ ಕಾಲ್ತುಳಿತವಾಗಿ ಮಹಿಳೆ ಸಾವನ್ನಪ್ಪಿದ ಪ್ರಕರಣದಲ್ಲಿ ಖ್ಯಾತ ನಟ ಅಲ್ಲು ಅರ್ಜುನ್ರನ್ನು ಇಂದು ಬೆಳಿಗ್ಗೆ ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದರು. ಇದೀಗ ನ್ಯಾಯಾಲಯ ಅಲ್ಲು ಅರ್ಜುನ್ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ ಎಂದು ಮಾಹಿತಿ ದೊರೆತಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಪೊಲೀಸರು ಇಂದು ಬೆಳಿಗ್ಗೆ ಅಲ್ಲು ಅರ್ಜುನ್ ಅವರ ನಿವಾಸಕ್ಕೆ ತೆರಳಿ ಅವರನ್ನು ಬಂಧಿಸಿದ್ದರು. ಬಂಧಿಸಿದ ನಂತರ ಗಾಂಧಿ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಪೋಲಿಸರು. ಮಧ್ಯಾಹ್ನಾದ ಹೊತ್ತಿಗೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನಾಂಪಲ್ಲಿ ನ್ಯಾಯಾಲಯ ನಟನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಮಾಹಿತಿ ದೊರೆತಿದೆ.
ನ್ಯಾಯಾಂಗ ಬಂಧನಕ್ಕೆ ವಿಧಿಸಿದ ಹಿನ್ನಲೆಯಲ್ಲಿ ನಟ ಅಲ್ಲು ಅರ್ಜುನ್ರನ್ನು ಚಂಚಲಗೂಡು ಕಾರಗೃಹಕ್ಕೆ ಶಿಫ್ಟ್ ಮಾಡುತ್ತಾರೆ ಎಂದು ಮಾಹಿತಿ ದೊರೆತಿದೆ.