ಉತ್ತರಪ್ರದೇಶ : 97 ವರ್ಷ ವಯಸ್ಸಿನ ಎಲ್‌ಕೆ ಅಡ್ವಾಣಿ ಅವರು ಕಳೆದ ಕೆಲ ಸಮಯಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾದ ಕಾರಣ ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜೆಪಿ ಭೀಷ್ಮ, ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರು ವಯೋಸಹಜ ಅನಾರೋಗ್ಯದಿಂದ ಇಂದು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಲಾಲ್‌ಕೃಷ್ಣ ಅಡ್ವಾಣಿ ಅವರು ಆಸ್ಪತ್ರೆಗೆ ದಾಖಲಾಗಿದ್ದರಿಂದ ಮಥುರಾ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಬಿಗಿಭದ್ರತೆ ನಿಯೋಜನೆ ಮಾಡಲಾಗಿದೆ. ಸದ್ಯ ಎಲ್‌ಕೆ ಅಡ್ವಾಣಿ ಅವರನ್ನು ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.