Sunday, December 22, 2024

ಟೈರ್​ ಬ್ಲಾಸ್ಟ್​​ : ಉರುಳಿಬಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್​ !

ಬಾಗಲಕೋಟೆ : ಟೈರ್​ ಬ್ಲಾಸ್ಟ್​ ಆಗಿ ಕಬ್ಬು ತುಂಬಿದ್ದ ಟ್ರಾಲಿ ರಸ್ತೆಗೆ ಉರುಳಿಬಿದ್ದು ಹೆದ್ದಾರಿಯಲ್ಲಿ ಟ್ರಾಫಿಕ್​ ಜಾಮ್​ ಆದ ಘಟನೆ ಬಾಗಲಕೋಟೆಯ ಜಮಖಂಡಿಯಲ್ಲಿ ನಡೆದಿದ್ದು. ಒಂದು ಘಂಟೆಗು ಹೆಚ್ಚು ಕಾಲ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್​ ಜಾಮ್​ ಆಗಿದೆ ಎಂದು ತಿಳಿದು ಬಂದಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹೊರವಲಯದಲ್ಲಿ ಘಟನೆ ನಡೆದಿದ್ದು. ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರ್​​ ಪಲ್ಟಿಯಾಗಿ ಧಾರವಾಡ – ವಿಜಯಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಕಬ್ಬು ಸಾಗಾಟ ಮಾಡುತ್ತಿದ್ದ ವೇಳೆ ಜಮಖಂಡಿ ಹೊರವಲಯದಲ್ಲಿ ಕಬ್ಬು ತುಂಬಿದ್ದ ಎರಡು ಟ್ರಾಲಿಗಳು ಉರುಳಿ ಬಿದ್ದಿದ್ದು. ಇದರಿಂದಾಗಿ ಒಂದು ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್​​ ಜಾಮ್​ ಆಗಿದೆ ಎಂದು ಮಾಹಿತಿ ದೊರೆತಿದೆ.

ಟ್ರಾಫಿಕ್​ ಜಾಮ್​ ಪರಿಣಾಮವಾಗಿ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಜೆಸಿಬಿ ಮೂಲಕ ರಸ್ತೆ ಮೇಲೆ ಬಿದ್ದಿರುವ ಕಬ್ಬಿನ ರಾಶಿಯನ್ನು ಪಕ್ಕಕ್ಕೆ ಸರಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

 

RELATED ARTICLES

Related Articles

TRENDING ARTICLES