ಮಂಡ್ಯ : ಕೆಲಸದ ಒತ್ತಡವನ್ನು ತಾಳಲಾರದೆ ಇಂಜಿನಿಯರ್ ಒಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದ ಮದ್ದೂರಿನಲ್ಲಿ ನಡೆದಿದ್ದು. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಮೃತನನ್ನು ಜ್ಞಾನೇಶ್ ಎಂದು ಗುರುತಿಸಲಾಗಿದೆ.
ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ವಾಸವಾಗಿದ್ದ ಜ್ಞಾನೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಶಿಂಷಾ ಏತ ನೀರಾವರಿ ಯೋಜನೆಯ ಪ್ಲಾಂಟ್ ಇಂಜಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದನು ಎಂದು ತಿಳಿದು ಬಂದಿದೆ.
ಆದರೆ ತನ್ನ ವಾಟ್ಸಪ್ ಸ್ಟೇಟಸ್ನಲ್ಲಿ ವರ್ಕ್ ಪ್ರಷೆರ್ ಎಂದು ಬರೆದುಕೊಂಡಿರುವ ಜ್ಞಾನೇಶ್ ನೆನ್ನೆ ರಾತ್ರಿ ವಾಟರ್ ಪ್ಲಾಂಟ್ಗೆ ತೆರಳಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ . ಘಟನೆ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.