ಶಿವಮೊಗ್ಗ: ಮಂಗಳೂರಿನಿಂದ ಜೋಗ ಜಲಪಾತಕ್ಕೆ ಬರುತ್ತಿದ್ದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಗರ ತಾಲೂಕಿನ ಮುಪ್ಪಾನೆ ಬಳಿ ನಡೆದಿದೆ.ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿದೆ. ಬಸ್ ಮಂಗಳೂರಿನಿಂದ ಜೋಗಕ್ಕೆ ಬರುತ್ತಿತ್ತು. ಈ ವೇಳೆ, ಮುಪ್ಪಾನೆ ಬಳಿಯ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಸುಮಾರು 55 ಜನರು ಈ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಮಾಹಿತಿ ದೊರೆತಿದ್ದು. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ ಎಂದು ಮಾಹಿತಿ ದೊರೆತಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸಾಗರದ ಸರ್ಕಾರಿ ಆಸ್ಪತ್ರೆ ಮತ್ತು ಕಾರ್ಗಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.