Wednesday, January 22, 2025

ಜಾಮೀನು ಪ್ರಕ್ರಿಯೆ ಅಂತ್ಯ : ಮತ್ತೆ ಆಸ್ಪತ್ರೆ ಕಡೆ ಮುಖ ಮಾಡಿದ ದರ್ಶನ್​ !

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ನಟ ದರ್ಶನ್ ಸೋಮವಾರ ಸೆಷನ್ಸ್ ಕೋರ್ಟ್ ಮುಂದೆ ಹಾಜರಾಗಿ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದರು. ಬಳಿಕ ಮತ್ತೆ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಗೆ ತೆರಳಿದರು.

ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಬಾಂಡ್ ಸಲ್ಲಿಕೆ ಪ್ರಕ್ರಿಯೆ ನಡೆಸಲು ದರ್ಶನ್ ಆಸ್ಪತ್ರೆಯಿಂದ ನೇರವಾಗಿ ಸೆಷನ್ಸ್ ಕೋರ್ಟ್ ಮುಂದೆ ಹಾಜರಾದರು. ದರ್ಶನ್‌ಗೆ ಸ್ನೇಹಿತ ಧನ್ವೀರ್ ಮತ್ತು ಸಹೋದರ ದಿನಕರ್ ಶ್ಯೂರಿಟಿ ನೀಡಿದರು. ಶ್ಯೂರಿಟಿ ವೇಳೆ, ದರ್ಶನ್ ನಿಮಗೆ ಏನಾಗಬೇಕು ಎಂದು ಜಡ್ಜ್ ಕೇಳಿದರು. ಅದಕ್ಕೆ, ಸ್ನೇಹಿತ ಮತ್ತು ಸಹೋದರ ಎಂದು ಧನ್ವೀರ್ ಮತ್ತು ದಿನಕರ್ ಹೇಳಿದರು. ಕೊನೆಗೆ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿ ದರ್ಶನ್ ಮತ್ತೆ ಆಸ್ಪತ್ರೆಗೆ ಹಿಂದಿರುಗಿದರು.

ದರ್ಶನ್‌ಗೆ ಬುಧವಾರದ ವರೆಗೂ ಚಿಕಿತ್ಸೆ ಮುಂದುವರಿಯುವ ಸಾಧ್ಯತೆ ಇದೆ. ಬಹುತೇಕ ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದು ಹೇಳಲಾಗಿದೆ. ವೈದ್ಯರ ಸಲಹೆ ಪಡೆದು ನಂತರ ದರ್ಶನ್ ಡಿಸ್ಚಾರ್ಜ್ ಆಗಲಿದ್ದಾರೆ

RELATED ARTICLES

Related Articles

TRENDING ARTICLES