ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭೀಕರ ಅಪಘಾತವಾಗಿದ್ದು. ಒರ್ವ ಮೃತನಾಗಿದ್ದು, ಮೂರು ಜನರಿಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ಭೀಕರ ದೃಷ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಹೊಸಪೇಟೆ ತಾಲೂಕಿನ ಡಣಾಯಕನ ಕೆರೆಯ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದ್ದು. ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತವಾಗಿದೆ. ಅಪಘಾತದಲ್ಲಿ ಹೊಸಪೇಟೆಯ ಮ್ಯಾಸಕೇರಿ ನಿವಾಸಿ ತಾಯಪ್ಪ( 40) ಎಂಬಾತ ಮೃತನಾಗಿದ್ದು. ಪತ್ನಿ ರಾಧಾ( 35), ಮಕ್ಕಳಾದ ದಿವ್ಯಾ(10) ಧ್ರುವ (08) ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಬಳ್ಳಾರಿಯ ಟ್ರಾಮಾಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ತಾಯಪ್ಪ ತನ್ನ ಪತ್ನಿ, ಮಕ್ಕಳೊಂದಿಗೆ ಬೈಕ್ನಲ್ಲಿ ಗರಗ ಗ್ರಾಮಕ್ಕೆ ತೆರಳಿದ್ದರು. ತಿರುಗಿ ವಾಪಾಸ್ ಬರುವಾಗ ಈ ಘಟನೆ ನಡೆದಿದ್ದು. ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಹೊರಟ್ಟಿದ್ದು ಕಾರು ತಾಯಪ್ಪನ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆ ಸಂಬಂಧ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.