Wednesday, December 18, 2024

ಸ್ನೇಹಿತನ ಮದುವೆಯಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು !

ಚಿತ್ರದುರ್ಗ ಡಿ.ಜೆ ಸೌಂಡ್​ಗೆ ಹೆಜ್ಜೆ ಹಾಕುತ್ತಿದ್ದ ಯುವಕ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ನಡೆದಿದ್ದು.ಮೃತ ಪಟ್ಟ ಯುವಕನನ್ನು ಆದರ್ಶ್​ ಎಂದು ಗುರುತಿಸಲಾಗಿದೆ ಎಂದು ಮಾಹಿತಿ ದೊರೆತಿದೆ.

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಪಗಡಲಬಂಡೆ ಗ್ರಾಮದಲ್ಲಿ ಘಟನೆ ನಡೆದಿದ್ದು. ನಿನ್ನೆ ತಡರಾತ್ರಿ ಆದರ್ಶ್​ ಎಂಬ 23 ವರ್ಷದ ಯುವಕ ತನ್ನ ಸ್ನೇಹಿತನ ಮದುವೆಯಲ್ಲಿ ಡಿ.ಜೆ ಸೌಂಡ್​ನಲ್ಲಿ ಡ್ಯಾನ್ಸ್​ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ತಕ್ಷಣವೆ ಆದರ್ಶ್​ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES