ಶಬರಿಮಲೆ : ಕನಕಪುರ ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಹಿತಿ ದೊರೆತಿದ್ದು. ಶಬರಿ ಮಲೆಗೆ ತೆರಳಿದ್ದ ವ್ಯಕ್ತಿ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಕನಕಪುರದ ನಿವಾಸಿಯಾಗಿದ್ದ ಕುಮಾರ್ ಅಯ್ಯಪ್ಪಸ್ವಾಮಿ ಮಾಲೆ ಧರಿಸಿದ್ದರು. ಮಾಲೆ ಧರಿಸಿದ್ದ ಕುಮಾರ್ ತಮ್ಮ ಸ್ನೇಹಿತರೊಂದಿಗೆ ಶಬರಿಮಲೆಗೆ ದರ್ಶನಕ್ಕೆ ಹೋಗಿದ್ದು. ಈ ವೇಳೆ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕುಮಾರ್ ಅವರ ಮೃತದೇಹವನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ರವಾನೆ ಮಾಡಿದ್ದು. ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ ಎಂದು ಮಾಹಿತಿ ದೊರೆತಿದೆ.