ದೆಹಲಿ : ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಿಯಾಂಕಾ ಅವರನ್ನು ಹೊಗಳುವ ಮೂಲಕ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ ಮತ್ತು ‘ಜವಾಹರಲಾಲ್ ನೆಹರು ಅವರಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಮೊಮ್ಮಗಳಿಂದ ನಾವು ಇನ್ನೇನು ನಿರೀಕ್ಷಿಸಬಹುದು?’ ಕುಬ್ಜರ ನಡುವೆ ಪ್ರಿಯಾಂಕಾ ಗಾಂಧಿ ಎತ್ತರವಾಗಿ ನಿಲ್ಲುತ್ತಾರೆ ಎಂದು ಬರೆದುಕೊಂಡಿದ್ದಾರೆ.
ಸಂಸತ್ ಚಳಿಗಾಲದ ಅಧಿವೇಶನಕ್ಕೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ ಹಿಡಿದು ಹೋಗಿದ್ದು ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಆದರೆ ಪ್ರಿಯಾಂಕಾ ಗಾಂಧಿಗೆ ಪಾಕಿಸ್ತಾನದಿಂದ ಪ್ರಶಂಸೆ ವ್ಯಕ್ತವಾಗಿದೆ. ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಪ್ಯಾಲೆಸ್ತೀನ್ ಎಂದು ಬರೆದಿರುವ ಚೀಲವನ್ನು ಸಂಸತ್ತಿನಲ್ಲಿ ಹೊತ್ತುಕೊಂಡಿದ್ದಕ್ಕಾಗಿ ಪಾಕಿಸ್ತಾನದ ಮಾಜಿ ಸಚಿವ ಚೌಧರಿ ಫವಾದ್ ಹುಸೇನ್, ಕಾಂಗ್ರೆಸ್ ಸಂಸದೆಯನ್ನು ಶ್ಲಾಘಿಸಿದ್ದಾರೆ.
ಇಲ್ಲಿಯವರೆಗೂ ಪಾಕಿಸ್ತಾನದ ಯಾವೊಬ್ಬ ಸಂಸದರೂ ಇಂತಹ ಧೈರ್ಯ ತೋರದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕೂಡ ಬರೆದುಕೊಂಡಿದ್ದಾರೆ ಎಂದು ಮಾಹಿತಿ ದೊರೆತಿದೆ.