ರಾಯಚೂರು: ಜಿಲ್ಲೆಯಲ್ಲಿ ಭೀಕರ ಅಪಘಾತವಾಗಿದ್ದು. ರಸ್ತೆ ಬದಿಯಲ್ಲಿ ಟೀ ಕುಡಿಯುತ್ತಾ ನಿಂತಿದ್ದ ಮೂವರು ನೀರಾವರಿ ಇಲಾಖೆಯ ಸಿಬ್ಬಂದಿಗಳ ಮೇಲೆ ಲಾರಿ ಉರುಳಿ ಬಿದ್ದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ರಾಯಚೂರು ಜಿಲ್ಲೆಯ, ಸಿಂಧನೂರು ಹೊರವಲಯದ ಡಾಲರ್ಸ್ ಕಾಲೋನಿ ಬಳಿ ಘಟನೆ ನಡೆದಿದೆ. ನೆನ್ನೆ ತಡರಾತ್ರಿ 12 ಗಂಟೆ ಸುಮಾರಿಗೆ ಸಿಂಧನೂರು ತಾಲ್ಲೂಕಿನ ರಾಂಪೂರ ಗ್ರಾಮದ ಶಿವರಾಜ್ ಕುಮಾರ್ (28) ಮಹೆಬೂಬ್ ಸಾಬ್ (30) ಮತ್ತು ಮಲ್ಲಿಕಾರ್ಜುನ್ (35) ರಸ್ತೆ ಬದಿಯಲ್ಲಿ ಟೀ ಕುಡಿಯುತ್ತಿರಬೇಕಾದರೆ ಅವಘಡ ಸಂಭವಿಸಿದೆ.
ರಸ್ತೆ ಬದಿಯಲ್ಲಿ ಟೀ ಕುಡಿಯುತ್ತಿದ್ದ ವೇಳೆ ಒಟ್ಟು ತುಂಬಿಕೊಂಡು ರಾಯಚೂರಿನಿಂದ ಸಿಂಧನೂರು ಕಡೆಗೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೂವರ ಮೇಲೆ ಉರುಳಿ ಬಿದ್ದಿದ್ದು. ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಮೂವರ ಶವವನ್ನು ರಾಯಚೂರಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತಪಟ್ಟ ಮೂವರನ್ನು ನೀರಾವರಿ ಇಲಾಖೆ ಸಿಬ್ಬಂದಿಗಳು ಎಂದು ಗುರುತಿಸಲಾಗಿದ್ದು. ಸ್ಥಳಕ್ಕೆ ಸಿಂದನೂರು ಸಂಚಾರಿ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.