ಬೆಳಗಾವಿ : ಸುವರ್ಣ ಸೌದದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ರಣಾಂಗಣವಾಗಿ ಬದಲಾಗಿದ್ದು. ಪರಿಷತ್ ಸದಸ್ಯ ಸಿ.ಟಿ.ರವಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿ.ಟಿ ರವಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ವಿಧಾನ ಪರಿಷತ್ ಕಲಾಪದಲ್ಲಿ ಅಂಬೆಡ್ಕರ್ ವಿಷಯಕ್ಕೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಸಿ.ಟಿ ರವಿ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು. ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಉಳಿದ ಕಾಂಗ್ರೆಸ್ ಸದಸ್ಯರು ಸಭಾಪತಿಗೆ ದೂರು ನೀಡಿದ್ದಾರೆ.
ಇದೇ ಕಾರಣಕ್ಕೆ ಬೆಳಗಾವಿಯ ಸುವರ್ಣ ಸೌದದ ವಿಐಪಿ ಗೇಟ್ನಲ್ಲಿ ಹೈಡ್ರಾಮ ನಡೆದಿದ್ದು. ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿ.ಟಿ ಬರುತ್ತಿದ್ದಂತೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಸಿಟಿ ರವಿಯ ಪೋಟೋಗೆ ಚಪ್ಪಲಿಯಲ್ಲಿ ಹೊಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಕಾರರು. ಸಿಟಿ. ರವಿಯನ್ನು ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.