Thursday, December 19, 2024

ಮೈಸೂರಿನಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ದರ್ಶನ್ !

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದಿರುವ ನಟ ದರ್ಶನ್​ ಚಿಕಿತ್ಸೆಗಾಗಿ ಮೈಸೂರಿಗೆ ತೆರಳಲು ಅವಕಾಶ ನೀಡಬೇಕು ಎಂದು ಸೆಷನ್ಸ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.

ಇದನ್ನೂ ಓದಿ : ಹೆಬ್ಬಾಳ್ಕರ್​ ಮೇಲೆ ಅವಹೇಳನಕಾರಿ ಪದ ಬಳಕೆ ಆರೋಪ : ಸಿ.ಟಿ ರವಿ ಕಾರಿಗೆ ಮುತ್ತಿಗೆ

ರೆಗ್ಯೂಲರ್​ ಬೇಲ್​ ಪಡೆದು ಹೊರಬಂದಿರುವ ನಟ ದರ್ಶನ್​ ನೆನ್ನೆಯಷ್ಟೆ ಬಿಜಿಎಸ್​ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಇದರ ನಡುವೆಯೆ ದರ್ಶನ್​ ಸೆಷನ್ಸ್​ ಕೋರ್ಟ್​ಗೆ ಮೈಸೂರಿಗೆ ತೆರಳಲು ಅವಕಾಶ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದು. 4 ವಾರಗಳ ಕಾಲ ಮೈಸೂರಿನಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿದ್ದಾರೆ. ಇದರ ಮಧ್ಯದಲ್ಲಿ ನ್ಯಾಯಾಲಯ ಅಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ SPP ಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

ದರ್ಶನ್​ಗೆ ರೆಗ್ಯೂಲರ್​ ಜಾಮೀನು ನೀಡಿ ಆದೇಶ ಹೊರಡಿಸಿರುವ ಹೈಕೋರ್ಟ್​ ಸೆಷನ್ಸ್​ ನ್ಯಾಯಾಲಯದ ವ್ಯಾಪ್ತಿಯನ್ನು ಬಿಟ್ಟ ಹೋಗುವಂತಿಲ್ಲ ಎಂದು ಷರತ್ತು ವಿಧಿಸಿದೆ. ಇದೇ ಕಾರಣಕ್ಕೆ ದರ್ಶನ್​ ಮೈಸೂರಿಗೆ ತೆರಳಿ ಚಿಕಿತ್ಸೆ ಪಡೆಯಲು ನ್ಯಾಯಾಲಯದ ಬಳಿ ಅರ್ಜಿ ಸಲ್ಲಿಸಿದ್ದಾರೆ.

RELATED ARTICLES

Related Articles

TRENDING ARTICLES