Saturday, January 18, 2025

ಕಾರು-ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ : ಭೀಕರ ಅಪಘಾತದಲ್ಲಿ ಐವರು ಸಾ*ವು !

ಲಖ್ನೋ : ಬುಧವಾರ(ಡಿ.18) ತಡರಾತ್ರಿ ದೆಹಲಿಗೆ ತೆರಳುತ್ತಿದ್ದ ಎರ್ಟಿಗಾ ಕಾರು ಎದುರಿಗೆ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕಾರು ಮತ್ತು ಟ್ರಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಬರೇಲಿ-ಇಟಾವಾ ಹೆದ್ದಾರಿಯ ಬರ್ಖೇಡಾ ಜೈಪಾಲ್ ಕ್ರಾಸ್‌ರೋಡ್ ಬಳಿ ಈ ಅಪಘಾತ ಸಂಭವಿಸಿದ್ದು, ಬುಧವಾರ ತಡರಾತ್ರಿ ದೆಹಲಿಗೆ ತೆರಳುತ್ತಿದ್ದ ಎರ್ಟಿಗಾ ಕಾರು ಎದುರಿಗೆ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಎಸ್ ತಿಳಿಸಿದ್ದಾರೆ. ಮೃತರನ್ನು ರಿಯಾಜುಲ್ ಅಲಿ ಅಮ್ನಾ ಗುಡಿಯಾ ತಮನ್ನಾ ಅನು ಮತ್ತು ನೂರ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : 

ಶಹಜಹಾನ್‌ಪುರದ ಕಾಂತ್ ಪಟ್ಟಣದ ನಿವಾಸಿಯಾಗಿರುವ ರಿಯಾಜುಲ್ ದೆಹಲಿಯಲ್ಲಿ ಗಾರ್ಮೆಂಟ್ ವ್ಯಾಪಾರ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುಟುಂಬವು ಬುಧವಾರ ರಾತ್ರಿ 10 ಗಂಟೆಗೆ ಮದುವೆಯಲ್ಲಿ ಭಾಗವಹಿಸಿದ ನಂತರ ದೆಹಲಿಗೆ ತೆರಳಿದ್ದರು. ಸ್ವಲ್ಪ ಸಮಯದ ನಂತರ ಅವರ ವಾಹನವು ಭೀಕರ ಅಪಘಾತಕ್ಕೀಡಾಗಿದೆ” ಎಂದು ಎಸ್ಪಿ ಹೇಳಿದ್ದಾರೆ. ಟ್ರಕ್ ಚಾಲಕನನ್ನು ವಶಕ್ಕೆ ಪಡೆದು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES