ದೇವನಹಳ್ಳಿ : ನಿಂತಿದ್ದ ಟ್ರ್ಯಾಕ್ಟರ್ಗೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತವಾಗಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದ್ದು. ರಸ್ತೆಯಲ್ಲಿ ಬಸ್ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಸಿಲಿಂಡರ್ ಬಿದ್ದು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ ಎಂದು ಮಾಹಿತಿ ದೊರೆತಿದೆ.
ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದ ಸಮೀಪ ಘಟನೆ ನಡೆದಿದ್ದು. ರಸ್ತೆ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ಗೆ ಗ್ಯಾಸ್ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದ್ದು. ಅಪಘಾತ ರಭಸಕ್ಕೆ ಗ್ಯಾಸ್ ಸಿಲಿಂಡರ್ಗಳು ರಸ್ತೆಯಲ್ಲಿ ಚಲ್ಲಾಪಿಲ್ಲಿಯಾಗಿದೆ.
ಅಪಘಾತವಾದ ಸ್ಥಳದಲ್ಲಿ ಶಾಲಾ ಮಕ್ಕಳು ಬಸ್ಗಾಗಿ ಕಾಯುತ್ತಿದ್ದರಿಂದ ಗ್ಯಾಸ್ ಸಿಲಿಂಡರ್ ಬಿದ್ದು ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.