Wednesday, January 22, 2025

ಸಿ.ಟಿ ರವಿಗೆ ಬಿಗ್​ ರಿಲೀಫ್​ : ಬಿಡುಗಡೆಗೊಳಿಸಿ ಎಂದು ಆದೇಶ ಹೊರಡಿಸಿದ ಹೈಕೋರ್ಟ್​ !

ಬೆಂಗಳೂರು : ವಿಧಾನ ಪರಿಷತ್​ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ, ಪರಿಷತ್​ ಸದಸ್ಯ ಸಿ.ಟಿ ರವಿಗೆ ಹೈಕೋರ್ಟ್​ ಬಿಗ್​ ರಿಲೀಫ್​ ನೀಡಿದ್ದು. ಸಿ,ಟಿ ರವಿಯನ್ನು ಬಂಧನದಿಂದ ಬಿಡುಗಡೆಗೊಳಿಸಬೇಕು ಎಂದು ಆದೇಶ ಹೊರಡಿಸಿದೆ.

ನಿನ್ನೆ ನಡೆದ ವಿಧಾನ ಪರಷತ್​ ಅಧಿವೇಶನದಲ್ಲಿ ಸಚಿವೆ ಹೆಬ್ಬಾಳ್ಕರ್​ಗೆ ಸಿ,ಟಿ ರವಿ ಅವಹೇಳನಕಾರಿ ಹೇಳಿಕೆ ನೀಡಿದರು ಎಂದು ಆರೋಪಿಸಿ ಹಿರೇಬಾಗೇವಾಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ FIR ದಾಖಲಿಸಿಕೊಂಡಿದ್ದ ಪೊಲೀಸರು ಬೆಳಗಾವಿ ಸುವರ್ಣ ಸೌದದಿಂದಲೆ ಅರೆಸ್ಟ್​ ಮಾಡಿದ್ದರು.

ಅರೆಸ್ಟ್​ ಮಾಡಿದ ನಂತರ ಪೊಲೀಸರು ಅನುಚಿಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದ ಸಿ.ಟಿ ರವಿ ಬೆಳಗಾವಿ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ವಿಚಾರಣೆ ನಡೆಸಿದ ನ್ಯಾಯಾಲಯ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಿತ್ತು. ಇದರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡುಕೆ ಮಾಡಿ ಆದೇಶ ಹೊರಡಿಸಿತ್ತು.

ಜನಪ್ರತಿನಿಧಿ ನ್ಯಾಯಾಲಯದಿಂದ ಶಾಕ್​, ಹೈಕೋರ್ಟ್​ನಿಂದ ರಿಲೀಫ್​ !

ಜನಪ್ರತಿನಿಧಿ ನ್ಯಾಯಾಲಯದಿಂದ ಜಾಮೀನು ದೊರಯದಿದ್ದರು ಕೂಡ ಹೈಕೋರ್ಟ್ ರಿಲೀಫ್​ ನೀಡಿದ್ದು. ಷರತ್ತು ಬದ್ದ ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ. ವಿಚಾರಣೆಗೆ ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿದೆ.

 

 

 

 

RELATED ARTICLES

Related Articles

TRENDING ARTICLES