Wednesday, January 22, 2025

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ : 34 ವಿದ್ಯಾರ್ಥಿಗಳಿಗೆ ಗಾಯ !

ಕಾರವಾರ : ಶೈಕ್ಷಣಿಕ ಪ್ರವಾಸ ಬಸ್ ಪಲ್ಟಿಯಾಗಿ ವಿಧ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಆರೋಳ್ಳಿ ಕ್ರಾಸ್ ಬಳಿ ನಡೆದಿದ್ದು. ಸುಮಾರು 34 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಕೋಲಾರ ಜಿಲ್ಲೆಯ, ಮಾಲೂರಿನ ಮಾಸ್ತಿಹಳ್ಳಿಯ ಕರ್ನಾಟಕ ಪ್ರೌಢ ಶಾಲೆಯ ವಿಧ್ಯಾರ್ಥಿಗಳು, ಉತ್ತರ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದರು. ಸುಮಾರು 40 ಜನ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಬಸ್​​ ಪಲ್ಟಿಯಾಗಿದ್ದು. ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ವಿಧ್ಯಾರ್ಥಿಗಳನ್ನು ಮಣಿಪಾಲ್​ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಸಿ. ಟಿ ರವಿಯ ಕೊ*ಲೆ ಮಾಡಲು ಪೊಲೀಸರು ಶಾಮೀಲಾಗಿದ್ದಾರೆ : ಆರ್​. ಅಶೋಕ್​

ಇನ್ನು ಉಳಿದ 34 ಜನ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯವಾಗಿದ್ದು. ಈ ವಿದ್ಯಾರ್ಥಿಗಳನ್ನು ಹೊನ್ನಾವರದ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದ್ದು. ಹೊನ್ನಾವರ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಮಾಹಿತಿ ದೊರೆತಿದೆ.

 

RELATED ARTICLES

Related Articles

TRENDING ARTICLES