Wednesday, January 22, 2025

ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಘರ್ಷಣೆ : ಪೊಲೀಸರಿಂದ ಲಾಠಿ ಪ್ರಹಾರ !

ಚಿಕ್ಕಮಗಳೂರು : ಸಿ.ಟಿ ರವಿ ಬಂಧನದ ವಿರುದ್ದವಾಗಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು. ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ನುಗ್ಗಿದ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು. ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರಿನ ಅಜಾದ್ ಪಾರ್ಕ್ ಬಳಿ ಘಟನೆ ನಡೆದಿದ್ದು. ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳದಲ್ಲಿ ಕಡಿಮೆ ಸಂಖ್ಯೆಯಲ್ಲಿ ಇದ್ದ ಪೊಲೀಸರು. ಈ ವೇಳೆ ಏಕಾಏಕಿ ಕಾಂಗ್ರೆಸ್ ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಸಿ.ಟಿ.ರವಿ ಬೆಂಬಲಿಗರು ಬಂದಿದ್ದು. ಈ ವೇಳೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು. ಎರಡು ಪಕ್ಷದ ಕಾರ್ಯಕರ್ತರು ಕೈಕೈ ಮಿಲಾಯಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ವೇಳೆ ಬಿಜೆಪಿ ಕಾರ್ಯಕರ್ತ ಶಶಾಂಕ್ ಹೆರೂರು ಮೇಲೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಗಿಬಿದ್ದಿದ್ದು. ಈ ವೇಳೆ ಕಾಂಗ್ರೆಸ್​ ಕಾರ್ಯಕರ್ತರು ಶಶಾಂಕ್​ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಕಾಂಗ್ರೆಸ್​ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದು. ಈ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಮತ್ತೆ ಲಾಠಿ ಪ್ರಹಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES