Wednesday, January 22, 2025

NIA ಕಾರ್ಯಚರಣೆ : ಪ್ರವೀಣ್​ ನೆಟ್ಟಾರು ಹತ್ಯೆಯೆ ಪ್ರಮುಖ ಆರೋಪಿ ದೆಹಲಿಯಲ್ಲಿ ಬಂಧನ

ದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ರಾಜ್ಯ ಕಾರ್ಯಕಾರಿಣಿ ಸದಸ್ಯನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಬಂಧಿಸಿದೆ.

ಬಂಧಿತನನ್ನು ಕೊಡಾಜೆ ಮೊಹಮ್ಮದ್ ಶೆರೀಫ್ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಲುಕ್‌ಔಟ್ ಸುತ್ತೋಲೆ ಇತ್ತು. ವಿವರಗಳ ಪ್ರಕಾರ, ಬಹ್ರೇನ್‌ನಿಂದ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅವನನ್ನು ಬಂಧಿಸಲಾಗಿದೆ ಎಂದು ಮಾಹಿತಿ ದೊರೆತಿದೆ.

ಇದನ್ನೂ ಓದಿ :ಕೋರ್ಟ್​ ಆದೇಶ ಪ್ರತಿಯನ್ನು ಪಡೆದು ಸಿ.ಟಿ ರವಿಯನ್ನು ಬಿಡುಗಡೆಗೊಳಿಸಿದ ಪೊಲೀಸರು !

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಪಿಎಫ್‌ಐ ಕಾರ್ಯಕರ್ತರು ಮತ್ತು ಸದಸ್ಯರು ಜುಲೈ 26, 2022 ರಂದು ಕೊಲೆ ಮಾಡಿದ್ದರು. ಆಗಸ್ಟ್ 4, 2022 ರಂದು ತನಿಖೆಯನ್ನು ಕೈಗೆತ್ತಿಕೊಂಡ NIA, ಇದುವರೆಗೆ 20 ಜನರನ್ನು ಬಂಧಿಸಿದೆ ಮತ್ತು RC-36/2022/NIA/DLI ಪ್ರಕರಣದಲ್ಲಿ ಮೂವರು ತಲೆಮರೆಸಿಕೊಂಡಿರುವವರು ಸೇರಿದಂತೆ 23 ಆರೋಪಿಗಳ  ವಿರುದ್ದ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES