ಚಾಮರಾಜನಗರ : ವಿದ್ಯಾರ್ಥಿಗಳಿಗೆ ಡಿ ಗ್ರೂಪ್ ನೌಕರ ಕಿರುಕುಳ ಕೊಡುತ್ತಿದ್ದಾನೆಂದು ಆರೋಪಿಸಿ ವಿದ್ಯಾರ್ಥಿಗಳು ಮತ್ತು ಪಾಲಕರು ಆಕ್ರೋಶ ಹೊರಹಾಕಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೊರಾರ್ಜಿ ಶಾಲೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಮೇಲುಕಾಮನಹಳ್ಳಿ ಪರಿಶೀಷ್ಟ ವರ್ಗದ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಇಂದು ವಿದ್ಯಾರ್ಥಿಗಳೊಂದಿಗೆ ಪೋಷಕರು ಸೇರಿ ಡಿ ಗ್ರೂಪ್ ನೌಕರ ಸೇರಿ ಕೆಲ ಶಿಕ್ಷಕರನ್ನು ಕೆಲಸದಿಂದ ತೆಗೆಯಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಸಿ.ಟಿ ರವಿಗೆ ಶ್ರಾದ್ದ ಮಾಡಿ ವಿಭಿನ್ನ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮಹಿಳಾ ಮಣಿಗಳು !
ವಸತಿ ಶಾಲೆಯ ಡಿ ಗ್ರೂಪ್ ನೌಕರ ನಾಗರಾಜ್ ಎಂಬಾತ ವಿದ್ಯಾರ್ಥಿಗಳಿಗೆ ಕಿರುಕುಳ ಕೊಡುತ್ತಿದ್ದು, ಪ್ರಿನ್ಸಿಪಾಲ್ಗೆ ಹೇಳಿದರೂ ಯಾವುದೇ ಕ್ರಮ ಇಲ್ಲವೆಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿರುವ ವಿದ್ಯಾರ್ಥಿಗಳು ಈ ಕೂಡಲೇ ಇವರ ವಿರುದ್ದ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ತೋರಿಸೋದು ಹಾಗೂ ಮೈಕೈ ಮುಟ್ಟುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸುತ್ತಿದ್ದು, ಪಾಲಕರು ಕೂಡ ಸಿಬ್ಬಂದಿ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಪ್ರತಿಭಟನಾ ಧರಣಿ ವಿಚಾರ ತಿಳಿದು ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಎಡಿಸಿ ಗೀತಾ ಹುಡೇದಾ ಹಾಗೂ ಪರಿಶಿಷ್ಟ ವರ್ಗಗಳ ಇಲಾಖೆಯ ಅಧಿಕಾರಿ ಬಿಂದ್ಯಾ ಸಹ ಬೇಟಿ ನೀಡಿದ್ದು, ಶಾಲಾ ಮಕ್ಕಳು ಹಾಗೂ ಶಿಕ್ಷಕರ ವಿಚಾರಣೆ ನಡೆಸಿದ್ದಾರೆ.
ಇನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಅವರ ವಿರುದ್ಧ ಕ್ರಮ ಜರಗಿಸುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದು, ವಿಚಾರಣೆಯ ನಂತರ ಅಧಿಕಾರಿಗಳು ಏನು ಕ್ರಮ ಕೈಗೊಳ್ಳುತ್ತಾರೆಂಬುದನ್ನ ನೋಡಬೇಕಾಗಿದೆ.