Saturday, December 21, 2024

ಅರವಿಂದ್​ ಕೇಜ್ರೀವಾಲ್​ರನ್ನು ವಿಚಾರಣೆ ನಡೆಸಲು ಅನುಮತಿ ಕೋರಿದ ED !

ಮಧ್ಯನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರಿಂದ ಇಡಿ ಅನುಮತಿಯನ್ನು ಪಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯು ನಿರ್ಣಾಯಕ ದೆಹಲಿ ಅಸೆಂಬ್ಲಿ ಚುನಾವಣೆಗೆ ವಾರಗಳ ಮುಂಚೆಯೇ ಬಂದಿರುವುದು ಆಮ್​ ಆದ್ಮಿಗೆ ಆಘಾತಕ್ಕೆ ಕಾರಣವಾಗಿದೆ.

ನವೆಂಬರ್ 6 ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಇಡಿ ಡಿಸೆಂಬರ್ 5 ರಂದು 2002 ರ ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (ಪಿಎಂಎಲ್‌ಎ) ಅಡಿಯಲ್ಲಿ ಕಾನೂನು ಕ್ರಮಕ್ಕೆ ಅನುಮತಿ ಕೋರಿತು. ಲೆಫ್ಟಿನೆಂಟ್ ಗವರ್ನರ್‌ಗೆ ಬರೆದ ಪತ್ರದಲ್ಲಿ, ಇಡಿ “ದೊಡ್ಡ ಮಟ್ಟದ ಭ್ರಷ್ಟಾಚಾರವನ್ನು ಕಂಡುಹಿಡಿದಿದೆ” ಎಂದು ಹೇಳಿದೆ.

ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಮತ್ತು ಸಿಬಿಐ ಕ್ರಮವಾಗಿ ಮಾರ್ಚ್ 21 ಮತ್ತು ಜೂನ್ 26 ರಂದು ಅಬಕಾರಿ ನೀತಿ ಹಗರಣದಿಂದ ಉಂಟಾದ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧಿಸಿತ್ತು. ಈ ಎರಡೂ ಪ್ರಕರಣಗಳಲ್ಲಿ ಅರವಿಂದ್​ ಕೇಜ್ರಿವಾಲ್​ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ.

RELATED ARTICLES

Related Articles

TRENDING ARTICLES