ಬೆಂಗಳೂರು : ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಳೆಯಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹೇಳಿದೆ.
ವಾಯುಭಾರ ಕುಸಿತವು ಗಂಟೆಗೆ 7 ಕಿ.ಮೀ ವೇಗದಲ್ಲಿ ಪೂರ್ವ-ಈಶಾನ್ಯಕ್ಕೆ ಚಲಿಸಿದೆ. ನಿನ್ನೆ ಅದೇ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದ್ದು, ಚೆನ್ನೈನ ಪೂರ್ವ-ಈಶಾನ್ಯಕ್ಕೆ ಸುಮಾರು 450 ಕಿ.ಮೀ. ಆಂಧ್ರ ಪ್ರದೇಶದ ವಿಶಾಖಪಟ್ಟಣದ ದಕ್ಷಿಣ-ಆಗ್ನೇಯಕ್ಕೆ 440 ಕಿ.ಮೀ, ಒಡಿಶಾದ ಗೋಪಾಲಪುರದ ದಕ್ಷಿಣ-ನೈಋತ್ಯಕ್ಕೆ 600 ಕಿ.ಮೀ. ವ್ಯಾಪ್ತಿಯಲ್ಲಿ ಇರಲಿದೆ. ಬಳಿಕ ಪೂರ್ವ-ಈಶಾನ್ಯಕ್ಕೆ ಚಲಿಸಿ ಅದರ ತೀವ್ರತೆಯನ್ನು ಕಾಪಾಡಿಕೊಳ್ಳಲಿದ್ದು, ನಂತರ ಸಮುದ್ರದಲ್ಲಿ ಕ್ರಮೇಣ ದುರ್ಬಲಗೊಳ್ಳುತ್ತದೆ ಎಂದು ಮಾಹಿತಿ ನೀಡಿದೆ.
ರಾಜ್ಯದಲ್ಲಿಯೂ ಭಾರಿ ಮಳೆ ಸಾಧ್ಯತೆ !
ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಮೇಲೂ ಕೊಂಚ ಮಟ್ಟದ ಪರಿಣಾಮ ಬೀರಲಿದ್ದು. ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು. ಬೆಂಗಳೂರು ನಗರ ಮತ್ತು ನೆರೆಹೊರೆಯ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಮಾಹಿತಿ ದೊರೆತಿದೆ.