Wednesday, January 22, 2025

ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು : ಆಸ್ಪತ್ರೆ ಮೇಲೆ ಕುಟುಂಬಸ್ಥರ ಆಕ್ರೋಶ !

ಬೆಳಗಾವಿ: ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು. ವೈದ್ಯರ ನಿರ್ಲಕ್ಷವೆ ಮಹಿಳೆಯ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ವೈಶಾಲಿ ಕೊಡಬಾಗಿ ಅವರು ಹೆರಿಗೆಗಾಗಿ ಬೆಳಗಾವಿ ಬಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ನೆನ್ನೆ ಬೆಳಿಗ್ಗೆ 9;30ಕ್ಕೆ ಸಿಸೇರಿಯನ್ ಮೂಲಕ‌ ಹೆಣ್ಣು ಮಗುವಿಗೆ ಜನ್ಮ ನೀಡಿದ ವೈಶಾಲಿಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿತ್ತು.

ತಕ್ಷಣ ಬಾಣಂತಿ ವೈಶಾಲಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಿತ್ತಾದರೂ, ಚಿಕಿತ್ಸೆ ಫಲಿಸದೇ ಮರಣ ಹೊಂದಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಆದರೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿಲ್ಲ ಎಂದು ವೈಶಾಲಿ ಪತಿ ಈರಣ್ಣ ಆರೋಪಿಸಿದ್ದಾರೆ. ಈ ಘಟನೆಯಿಂದ ಆಸ್ಪತ್ರೆಯಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಎಪಿಎಂಸಿ ಪೊಲೀಸರು ಆಗಮಿಸಿದ್ದಾರೆ.

RELATED ARTICLES

Related Articles

TRENDING ARTICLES