ಬೆಂಗಳೂರು : ಇಂದು ಬೆಳಿಗ್ಗೆ ಶಾಸಕ ಮುನಿರತ್ನ ಮೇಲೆ ಮೊಟ್ಟೆಯಿಂದ ಹಲ್ಲೆಯಾಗಿತ್ತು. ಇದಾದ ನಂತರ ಶಾಸಕ ಮುನಿರತ್ನ ನನ್ನ ಕೊಲೆ ಮಾಡಲು ಡಿ,ಕೆ ಶಿವಕುಮಾರ್, ಡಿ.ಕೆ ಸುರೇಶ್ ಮತ್ತು ಕುಸುಮ ಯತ್ನಿಸಿದ್ದಾರೆ. ನನ್ನ ಕೊಲೆಯಾದರೆ ಅದು ಒಂದು ಹೆಣ್ಣಿಂದ, ಅದು ಕುಸುಮ ಎಂದು ಆರೋಪಿಸಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣ ಎಕ್ಷ್ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕಿ ಕುಸುಮಾ ಅವರು ಮುನಿರತ್ನನ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಎಕ್ಷ್ ಖಾತೆಯಲ್ಲಿ ಕುಸುಮ ಹನುಮಂತರಾಯಪ್ಪ ಈ ಕೆಳಗಿನಂತೆ ಬರೆದುಕೊಂಡಿದ್ದಾರೆ.
ಶಾಸಕ ಮುನಿರತ್ನ ಅವರ ಮೇಲಿನ “ಮೊಟ್ಟೆ ಅಟ್ಯಾಕ್” ಚಿತ್ರದ ರಚನೆ ಹಾಗೂ ನಿರ್ಮಾಣ ಸ್ವತಃ ಅವರದ್ದೇ, ದಲಿತರನ್ನು ತುಚ್ಚವಾಗಿ ನಿಂದಿಸಿ, ಒಕ್ಕಲಿಗ ಗುತ್ತಿಗೆದಾರನ ಕುಟುಂಬದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನ ಮಾಡಿದ್ದ ಧ್ವನಿ FSL ರಿಪೋರ್ಟ್ ನಲ್ಲಿ ಅವರದ್ದೇ ಎಂದು ಸಾಬೀತಾದ ಬೆನ್ನಲ್ಲೇ ತರಹೇವಾರಿ ನಾಟಕಗಳು ಶುರುವಾಗಿದೆ.
ಇದನ್ನೂ ಓದಿ : ಮುನಿರತ್ನ ಭೇಟಿಯಾಗಿ ತಪಾಸಣೆ ನಡೆಸಿದ ಸಂಸದ ಮಂಜುನಾಥ್ !
ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಈತನ ಪಾಪದ ಕೆಲಸಗಳಿಗೆ ತಕ್ಕ ಶಾಸ್ತಿ ಆಗೇ ಆಗುತ್ತದೆ, ಆದರೆ ತನ್ನ ತಪ್ಪು ಮುಚ್ಚಿಕೊಳ್ಳಲು ನನ್ನ ಹೆಸರನ್ನು ವಿನಾಕಾರಣ ಎಳೆದು ತರುವುದು ಎಷ್ಟು ಸರಿ? ಇಂದಿನ ಪ್ರಹಸನದ ಹಿಂದಿನ ದುರುದ್ದೇಶಗಳನ್ನು ಅರಿಯದೆ ಈತನ ಕತೆಗಳನ್ನು ನಂಬುವಷ್ಟು ನಮ್ಮ ಜನರು ದಡ್ಡರೂ, ಮೂರ್ಖರೂ ಅಲ್ಲ.
ಕಾಲಾಯ ತಸ್ಮೈ ನಮಃ!