ದೇವನಹಳ್ಳಿ : ಮನೆಯ ಮುಂದೆ ಇದ್ದ ಗಿಡಗಳಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದು. ಅಪಘಾತದ ರಭಸಕ್ಕೆ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿದಿದ್ದಾರೆ. ಡಿಕ್ಕಿ ಹೊಡೆದ ನಂತರ ಕಾರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಮಾಹಿತಿ ದೊರೆತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೊಡ್ಡಬಳ್ಳಾಪುರ ತಾಲೂಕಿನ, ಗೊಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು. ರತ್ಮಮ್ಮ ಎಂಬ ಮಹಿಳೆ ಮನೆ ಮುಂದೆ ಇದ್ದ ಹೂವಿನ ಗಿಡಗಳಲ್ಲಿ ಹೂಗಳನ್ನು ಬಿಡಿಸುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಅತ್ಯಂತ ವೇಗವಾಗಿ ಬಂದ ಕಾರು ಮಹಿಳೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆಯುತ್ತಿದ್ದಂತೆ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ : ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ದ ಗಂಭೀರ ಆರೋಪ !
ಅಪಘಾತದ ನಂತರ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದ್ದು. ದೊಡ್ಡಬಳ್ಳಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.