Friday, December 27, 2024

ಆಕಸ್ಮಿಕ ಬೆಂಕಿ ತಗುಲಿ 6 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ನಾಶ !

ಬೀದರ್ : ಆಕಸ್ಮಿಕವಾಗಿ ಕಬ್ಬಿನ ಗದ್ದೆಗೆ ಬೆಂಕಿ ತಗುಲಿದ ಪರಿಣಾಮವಾಗಿ ಸುಮಾರು 6 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ನಾಶವಾಗಿದ್ದು. ಬೀದರ್​ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಕೈಗೆ ಬಂದಿದ್ದ ಬೆಳೆಯನ್ನು ಕಳೆದುಕೊಂಡಿರುವ ರೈತ ಕಂಗಲಾಗಿದ್ದು ಪರಿಹಾರಕ್ಕೆ ಮನವಿ ಮಾಡಿದ್ದಾರೆ.

ಬೀದರ್ ಜಿಲ್ಲೆಯ, ಔರಾದ್ ತಾಲೂಕಿನ, ಕಂದಗೂಳ‌ ಗ್ರಾಮದಲ್ಲಿ ಘಟನೆ ನಡೆದಿದ್ದು. ಶಾಂತಮ್ಮ ಚಜನಕೋಡೆ ಎಂಬುವವರಿಗೆ ಸೇರಿದ್ದ 3 ಎಕರೆ ಹಾಗೂ ವಿಶ್ವನಾಥ್ ಪಾಟೀಲ್ ಎಂಬುವವರಿಗೆ ಸೇರಿದ್ದ 3 ಎಕರೆ ಕಬ್ಬು ನಾಶವಾಗಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿಯಿಂದ ಕಬ್ಬನ ಬೆಳೆ ಸುಟ್ಟು ಕರಕಲಾಗಿದ್ದು. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ನಂತರ ಹಾಲಿನ ದರ ಹೆಚ್ಚಳ ಸಾಧ್ಯತೆ : ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ಮುಂದಾದ KMF !

ಕೈಗೆ ಬಂದಿದ್ದ ಲಕ್ಷಾಂತರ ಮೌಲ್ಯದ ಫಸಲನ್ನು ಕಳೆದುಕೊಂಡಿರುವ ರೈತರು ಕಂಗಾಲಾಗಿದ್ದು. ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

 

RELATED ARTICLES

Related Articles

TRENDING ARTICLES