ಬೀದರ್ : ಜಿಲ್ಲೆಯಲ್ಲಿ ಗುತ್ತಿಗೆದಾರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು. 26 ವರ್ಷದ ಸಚಿನ್ ಎಂಬಾತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದರ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಮೇಲೆ ಗಂಭೀರ ಆರೋಪ ಬಂದಿದ್ದು. ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಬೀದರ್ ಜಿಲ್ಲೆಯೆ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದು. 7 ಪುಟಗಳ ಸಮಗ್ರ ಡೆತ್ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದರ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಟೆಂಡರ್ ಕೊಡುವ ನೆಪದಲ್ಲಿ ಗುತ್ತಿಗೆದಾರ ಸಚಿನ್ನಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಗುತ್ತಿಗೆ ದಾರನಿಗೆ ವಂಚಿಸಿದ್ದನು. ಬಳಿಕ ಮತ್ತೆ ಗುತ್ತಿಗೆದಾರನಿಗೆ 1 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದನು ಮತ್ತು ಅದನ್ನು ನೀಡದಿದ್ದರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದನು.
ಇದನ್ನೂ ಓದಿ:ಆನ್ಲೈನ್ ಗೇಮ್ ಹುಚ್ಚಾಟಕ್ಕೆ ಲಕ್ಷಾಂತರ ಸಾಲ : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ !
ಇವೆಲ್ಲದರಿಂದ ಭಯಗೊಂಡಿದ್ದ ಸಚಿನ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದು. ಸಾವಿಗೂ ಮುನ್ನ ಸುಮಾರು 7 ಪುಟಗಳ ಸುದೀರ್ಘ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ನಲ್ಲಿ ಕಲಬುರಗಿಯ ಮಾಜಿ ಕಾರ್ಪೊರೇಟ್ ರಾಜು ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ದ ಜೀವ ಬೆದರಿಕೆ ಆರೋಪ ಮಾಡಿದ್ದಾರೆ.
ಮೃತದೇಹ ಎತ್ತಲು ಬಿಡದ ಕುಟುಂಬಸ್ಥರು !
ಸಚಿನ್ ಆತ್ಮಹತ್ಯೆಗೆ ಶರಣಾದ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು. ಡೆತ್ ನೋಟ್ನಲ್ಲಿ ಉಲ್ಲೇಖವಿರುವ ಆರೋಪಿಗಳನ್ನು ಸ್ಥಳಕ್ಕೆ ಕರೆಸುವಂತೆ ಪಟ್ಟು ಹಿಡಿದಿದ್ದು. ರೈಲನ್ನು ತಡೆಹಿಡಿದು ನ್ಯಾಯಾಕ್ಕಾಗಿ ಹೋರಾಟ ಮಾಡಿದ್ದಾರೆ. ಕೊನೆಗೆ ಕುಟುಂಬಸ್ಥರ ವಿರೋದದ ಮಧ್ಯೆಯೆ ಮೃತದೇಹವನ್ನು ಬೀದರ್ನ ಬ್ರೀಮ್ಸ್ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದು. ಬೀದರ್ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.