Friday, December 27, 2024

ಸಂಕ್ರಾಂತಿ ನಂತರ ಹಾಲಿನ ದರ ಹೆಚ್ಚಳ ಸಾಧ್ಯತೆ : ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ಮುಂದಾದ KMF !

ಬೆಂಗಳೂರು: ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಹಬ್ಬದ ಬಳಿಕ ಹಾಲಿನ ದರದ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಎಂಎಫ್​ ಅಧ್ಯಕ್ಷ ಭೀಮಾನಾಯಕ್​, ಬುಧವಾರ ನಡೆದ ಹಾಲಿನ ಒಕ್ಕೂಟದ ಸಭೆಯಲ್ಲಿ 5 ರೂ. ದರ ಏರಿಕೆಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ನಾವು ಪರಿಶೀಲಿಸುತ್ತೇವೆ. ಸರ್ಕಾರದ ಮುಂದೆ ಪ್ರಸ್ತಾವನೆ ಇಟ್ಟು ತೀರ್ಮಾನ ಮಾಡುತ್ತೇವೆ.

ಇದನ್ನೂ ಓದಿ : 

ಇನ್ನೂ ನಂದಿನಿ ಹಾಲಿನಲ್ಲಿ 50 ಎಂಎಲ್ ಹೆಚ್ಚುವರಿ ನೀಡಿ, 2 ರೂ. ಹೆಚ್ಚಳ ಮಾಡಲಾಗಿತ್ತು. ಈ ಹೆಚ್ಚುವರಿ ಹಾಲು ವಾಪಸ್‍ಗೆ ನಿರ್ಧಾರ ಮಾಡಲಾಗಿದೆ ಅದರ ಜೊತೆಗೆ ಹೆಚ್ಚುವರಿ ಹಾಲಿಗೆ ವಿಧಿಸಿದ್ದ ಹೆಚ್ಚುವರಿ ಹಣ ಎರಡು ರೂಪಾಯಿಯನ್ನು ವಾಪಾಸ್​ ಪಡೆಯುತ್ತೇವೆ.

ಹೆಚ್ಚುವರಿ ಹಾಲು ನೀಡಲು ಕಾರಣವೇನು !

ಕಳೆದ ಐದು ವರ್ಷದಲ್ಲಿ ಏಕಾಏಕಿ ಹಾಲಿನ ಉತ್ಪಾದನೆ ಹೆಚ್ಚಾಗಿತ್ತು. ಹೀಗಾಗಿ ಕೆಎಂಎಫ್ 50 ಎಂಎಲ್ ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ 2 ರೂ. ಹೆಚ್ಚು ಮಾಡಿತ್ತು. ಆದರೆ ಈಗ ಹಾಲಿನ ಉತ್ಪಾದನೆ ಯಥಾಸ್ಥಿತಿಗೆ ಬಂದಿದೆ. ಹೀಗಾಗಿ ಹೆಚ್ಚುವರಿ ಹಾಲು 50 ಎಂಎಲ್‍ನ್ನು ಕಡಿತ ಮಾಡಿ ಈ ಹಿಂದಿನಂತೆ ಸರಬರಾಜು ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES