ಬೆಳಗಾವಿ : ಗಾಂಧಿ ನೇತೃತ್ವದಲ್ಲಿ ನಡೆದ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಮೂರು ವರ್ಷದ ತುಂಬಿದ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಬೃಹತ್ ಸಮಾವೇಶವನ್ನು ಕಾಂಗ್ರೆಸ್ ಆಯೋಜನೆ ಮಾಡಿದೆ. ಇದರ ಬೆನ್ನಲ್ಲೆ ಬೆಳಗಾವಿಯಲ್ಲಿ ಕಟ್ಟಿರುವ ಕೆಲವು ಬ್ಯಾನರ್ಗಳಲ್ಲಿ ಭಾರತದ ನಕಾಶೆಯನ್ನು ತಿರುಚಿರುವುದು ಕಂಡುಬಂದಿದ್ದು. ಇದಕ್ಕೆ ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಷ್ನಲ್ಲಿ ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.
ಇದನ್ನೂ ಓಧಿ : ರೈಲ್ವೇ ಟ್ರ್ಯಾಕ್ ಮೇಲೆ ಕುಳಿತಿದ್ದ ಯುವಕರ ಮೇಲೆ ಹರಿದು ರೈಲು : ಇಬ್ಬರು ಯುವಕರ ಧಾರುಣ ಸಾ*ವು!
ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ದೇಶದ ಪ್ರಮುಖ ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದು. ಇದರ ಬೆನ್ನಲ್ಲೆ ಜಿಲ್ಲೆಯಲ್ಲಿ ಕಟ್ಟಿರುವ ಕೆಲುವು ಬ್ಯಾನರ್ಗಳಲ್ಲಿ ಭಾರತ ಕಾಶ್ಮೀರವನ್ನು ಅಪೂರ್ಣವಾಗಿ ಚಿತ್ರಿಸಿದ್ದು. ಪಾಕ್ ಆಕ್ರಮಿತ ಕಾಶ್ಮೀರವಿಲ್ಲದ ಭಾರತದ ಭೂಪಟವನ್ನು ಬ್ಯಾನರ್ಗಳಲ್ಲಿ ಚಿತ್ರಿಸಿದ್ದಾರೆ,
ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ !
ಕಾಂಗ್ರೆಸ್ನ ಬ್ಯಾನರ್ನಲ್ಲಿ ಭಾರತದ ಭೂಪಟದಲ್ಲಿ ಕಾಶ್ಮೀರದ ಕೆಲವು ಭಾಗ ನಾಪತ್ತೆ ವಿಚಾರವಾಗಿ ಟ್ವಿಟ್ ಮಾಡಿರುವ ಬಿಜೆಪಿ ‘ ಕಾಂಗ್ರೆಸ್ ಪಕ್ಷ ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ. ಗಾಂಧಿ ಹೆಸರಲ್ಲಿ ಭಾರತದ ನಕಾಶೆಯನ್ನು ತಿರುಚಿರುವುದು ದೇಶದ್ರೋಹ. ವೈಯಕ್ತಿಕ ಸಾಧನೆಗಾಗಿ ಮತ್ತು ಓಲೈಕೆ ರಾಜಕಾರಣಕ್ಕಾಗಿ ಕಾಂಗ್ರೆಸ್ ಎಂತಹ ಹೀನ ಕೆಲಸಕ್ಕಾದರೂ “ಸಿದ್ದ” ಎಂಬುದಕ್ಕೆ ಬೆಳಗಾವಿಯಲ್ಲಿ ಹಾಕಿಸಿರುವ ಬ್ಯಾನರ್‌ಗಳೇ ಸಾಕ್ಷಿ.
ಸಿಎಂ ಸಿದ್ದರಾಮಯ್ಯ ಅವರೆ, ಕೂಡಲೇ ಈ ವಿವಾದಿತ ಬ್ಯಾನರ್ ಗಳನ್ನು ತೆರವುಗೊಳಿಸಿ, ಭಾರತದ ನಕಾಶೆಯನ್ನು ತಿರುಚಿದ ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರಾಜ್ಯ ಬಿಜೆಪಿ ಆಗ್ರಹ ವ್ಯಕ್ತಪಡಿಸಿದೆ.