ಶಿವಮೊಗ್ಗ : ಮೊಬೈಲ್ ನೋಡಬೇಡ ಎಂದು ಹೇಳಿದ್ದಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು. ಧನುಶ್ರೀ ಎಂಬ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಶಿವಮೊಗ್ಗದ ಹಾರನಹಳ್ಳಿ ಗ್ರಾಮದ ನಿವಾಸಿಯಾದ 20 ವರ್ಷದ ಧನುಶ್ರೀ ಎಂಬ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು. ಯುವತಿ ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದಳು. ಆದರೆ ಯುವತಿ ಹೆಚ್ಚು ಮೊಬೈಲ್ ನೋಡುತ್ತಿದ್ದ ಕಾರಣ ಮನೆಯವರು ಹೆಚ್ಚು ಮೊಬೈಲ್ ನೋಡಬೇಡ ಎಂದು ಹೇಳಿದ್ದಕ್ಕೆ ಮನನೊಂದ ಯುವತಿ ಮೂರು ದಿನದ ಹಿಂದೆ ಆತ್ಮಹತ್ಯೆ ಯತ್ನಿಸಿದ್ದಾಳೆ.
ಇದನ್ನೂ ಓದಿ : ಆಕಸ್ಮಿಕ ಬೆಂಕಿ ತಗುಲಿ 6 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ನಾಶ !
ಮೂರು ದಿನದಿಂದ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಯುವತಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ದೊರೆತಿದೆ.