ನ್ಯೂಯಾರ್ಕ್ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಅಮೇರಿಕಾ ಸಂತಾಪ ವ್ಯಕ್ತಪಡಿಸಿದ್ದು, ಅಮೇರಿಕಾ-ಭಾರತ ಸಂಬಂಧಗಳನ್ನು ಬಲಪಡಿಸುವಲ್ಲಿ ಮನಮೋಹನ ಸಿಂಗ್ ಅವರ ಪಾತ್ರ ಹೆಚ್ಚು ಮಹತ್ವ ಪಡೆದಿದೆ ಎಂದು ಅಗಲಿದ ಆರ್ಥಿಕ ತಜ್ಙನ ನಿಧನಕ್ಕೆ ಅಮೇರಿಕಾದ ವಿದೇಶಾಂಗ ಇಲಾಖೆ ಕಂಬನಿ ಮಿಡಿದಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಸಂತಾಪ ಸೂಚಿಸಿದ್ದು “ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯ ಶ್ರೇಷ್ಠ ಚಾಂಪಿಯನ್‌ಗಳಲ್ಲಿ ಒಬ್ಬರು” ಎಂದು ಕರೆದಿದ್ದಾರೆ.
ಇದನ್ನೂ ಓದಿ: ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆ ನಡೆಯಲಿದೆ !
“ಡಾ. ಸಿಂಗ್ ಅವರು ಅಮೇರಿಕಾ-ಭಾರತದ ಕಾರ್ಯತಂತ್ರದ ಪಾಲುದಾರಿಕೆಯ ಶ್ರೇಷ್ಠ ಚಾಂಪಿಯನ್‌ಗಳಲ್ಲಿ ಒಬ್ಬರು, ಮತ್ತು ಅವರ ಕೆಲಸವು ಕಳೆದ ಎರಡು ದಶಕಗಳಲ್ಲಿ ಅರಡು ದೇಶಗಳ ಅಭಿವೃದ್ದಿಗೆ ಸಾಕಷ್ಟು ಕೊಡುಗೆ ನೀಡಿದೆ. ಎಂದು ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಸಂತಾಪ ಸೂಚಿಸಿದ್ದಾರೆ.
ನಾಳೆ ನಡೆಯಲಿದೆ ಆರ್ಥಿಕತೆಯ ಹರಿಕಾರನ ಅಂತ್ಯಕ್ರಿಯೆ !
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.