ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಂದಕಕ್ಕೆ ಆಲ್ಟೋ ಕಾರು ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ನಸುಕಿನ ಜಾವ 4:15ರ ಸುಮಾರಿಗೆ ಕಾರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿತ್ತು. ಈ ವೇಳೆ ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ದೊರೆತಿದೆ. ಮೃತರನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್, ಚಿದಾನಂದ, ರಮೇಶ್ ಎಂದು ಗುರುತಿಸಲಾಗಿದೆ.
ಇದನ್ನೂ ಓದ : ಅಲ್ಲು ಅರ್ಜುನ್ ಅಹಂಕಾರಕ್ಕೆ ಇಡೀ ಟಾಲಿವುಡ್ ತಲೆತಗ್ಗಿಸುವಂತಾಗಿದೆ : ತೆಲುಗು ನಿರ್ದೇಶಕ
ಅಪಘಾತವಾದ ಸ್ಥಳಕ್ಕೆ ಪುತ್ತೂರು ಸಂಚಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.