Sunday, December 29, 2024

ಗ್ಯಾಸ್​ ಸಿಲಿಂಡರ್​ ಸಾಗಿಸುತ್ತಿದ್ದ ಕ್ಯಾಂಟರ್​ಗೆ ಲಾರಿ ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ !

ಚಿಕ್ಕಬಳ್ಳಾಪುರ: ಸಿಎನ್‍ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರದ ಹುನೇಗಲ್ ಗ್ರಾಮದ ಬಳಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಮಾಹಿತಿ ದೊರೆತಿದೆ.

ಘಟನೆಯಲ್ಲಿ ಚಾಲಕ ನರಸಿಂಹಮೂರ್ತಿ ಹಾಗೂ ಮಾದಪ್ಪ ಎಂಬವರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುನೇಗಲ್ ಬಳಿ ಯೂ ಟರ್ನ್ ಪಡೆಯಲು ನಿಂತಿದ್ದ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ : ಬೆಟ್ಟಿಂಗ್​ ಆ್ಯಪ್​ ನಿಷೇದಿಸುವಂತೆ ಫೇಸ್​ಬುಕ್​ ಲೈವ್​ನಲ್ಲಿ ಮನವಿ ಮಾಡಿ ಸಾವನ್ನಪ್ಪಿದ ಯುವಕ !

ಸಿಎನ್‍ಜಿ ಸಿಲಿಂಡರ್ ತುಂಬಿದ್ದ ಲಾರಿಗೆ, ಗ್ರ್ಯಾನೆಟ್​ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸಿಎನ್‍ಜಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದು. ಸ್ಥಳಕ್ಕೆ ಬೇಟಿ ನೀಡಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಕ್ರೇನ್​ ಮೂಲಕ ವಾಹನಗಳನ್ನು ತೆರವುಗೊಳಿಸಿದ್ದಾರೆ. ಘಟನ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES