ಕಾರವಾರ : ಪ್ರವಾಸಿಗರ ಬಸ್ ಪಲ್ಟಿಯಾಗಿ 20 ಪ್ರವಾಸಿಗರಿಗೆ ಗಾಯವಾಗಿರುವ ಘಟನೆ ಹೊನ್ನಾವರದಲ್ಲಿ ನಡೆದಿದ್ದು. ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ.
ಉತ್ತರಕನ್ನಡ ಜಿಲ್ಲೆಯೆ ಹೊನ್ನಾವರದ, ಮುಗ್ವಾ ಕ್ರಾಸ್ ಬಳಿಯಲ್ಲಿ ದುರ್ಘಟನೆ ನಡೆದಿದ್ದು. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ವೇಳೆ ಅಪಘಡ ಸಂಭವಿಸಿದೆ. ಕುಟುಂಬಸ್ಥರು, ಸ್ನೇಹಿತರು ಸೇರಿ ಪ್ರವಾಸಕ್ಕೆಂದು ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಮಾರ್ಗಮಧ್ಯದಲ್ಲಿ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ : ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್ಗೆ ಲಾರಿ ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ !
ಅಪಘಾತದಲ್ಲಿ 20 ಪ್ರವಾಸಿಗರಿಗೆ ಗಾಯವಾಗಿದ್ದು. ಇವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇವರೆಲ್ಲರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು. ಘಟನೆ ಸಂಬಂಧ ಹೊನ್ನವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.