ಮೆಲ್ಬೋರ್ನ್: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 184 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಇದಕ್ಕೂ ಮುನ್ನ ಈ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ 295 ರನ್ಗಳ ಜಯ ಸಾಧಿಸಿತ್ತು. ಇದಾದ ಬಳಿಕ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್ಗಳ ವಿಜಯ ದಾಖಲಿಸಿತು. ಇನ್ನು ಮೂರನೇ ಪಂದ್ಯ ಡ್ರಾನಲ್ಲಿ ಕೊನೆಗೊಂಡರೆ, ಇದೀಗ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ.
ಐದು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡನ 2-1 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದು. ಕೊನೆಯ ಪಂದ್ಯದ ಮೇಲೆ ಕ್ರೀಡಾಪ್ರಿಯರ ಕಣ್ಣು ನೆಟ್ಟಿದೆ.
ಮೊದಲ ಇನ್ನಿಂಗ್ಸ್ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ತಂಡ ಅಧ್ಬತ ಬ್ಯಾಟಿಂಗ್ ಪ್ರದರ್ಶಿಸಿತು. ಆಸ್ಟ್ರೇಲಿಯಾ ಪರ ಸ್ಯಾಮ್ ಕೊನ್ಸ್ಟಾಸ್ (60), ಉಸ್ಮಾನ್ ಖ್ವಾಜಾ (57), ಮಾರ್ನಸ್ ಲಾಬುಶೇನ್ (72) ಅರ್ಧಶತಕ ಬಾರಿಸಿದರು. ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಟೀವ್ ಸ್ಮಿತ್ (140) ಭರ್ಜರಿ ಶತಕ ಸಿಡಿಸಿದರು. ಈ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ನಲ್ಲಿ 474 ರನ್ ಕಲೆಹಾಕಿತು. ಟೀಮ್ ಇಂಡಿಯಾ ಪರ ಬುಮ್ರಾ 4 ವಿಕೆಟ್ ಪಡೆದರೆ, ಜಡೇಜಾ 3 ವಿಕೆಟ್ ಕಬಳಿಸಿದರು.
ಇದನ್ನೂ ಓದಿ : ಸಿದ್ದರಾಮಯ್ಯರಿಂದ ಹೆಚ್ಚು ತೊಂದರೆಗೊಳಗಾದ ರಾಜಕಾರಣಿ ಎಂದರೆ ಅದು ನಾನು : ಪ್ರತಾಪ್ ಸಿಂಹ
ಇದರ ಬೆನ್ನಲ್ಲೆ ಬ್ಯಾಟಿಂಗ್ ಇಳಿದ ಭಾರತ ತಂಡ ಆರಂಭಿಕ ಆಘಾತ ಎದುರಿಸಿದರು ಕೂಡ ಎಂಟನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದ ನಿತಿಶ್ ರೆಡ್ಡಿ ಶತಕ ಮತ್ತು ವಾಷಿಂಗಟನ್ ಸುಂದರ್ ಅವರ ಅರ್ಧಶತಕದ ನೆರವಿನಿಂದ 369 ರನ್ಗಳಿಗೆ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ ಅಂತ್ಯಗೊಳಿಸಿತು. ಆಸ್ಟ್ರೇಲಿಯಾ ಪರ ಕಮಿನ್ಸ್, ಬೋಲ್ಯಾಂಡ್ ಹಾಗೂ ನಾಥನ್ ಲಿಯಾನ್ ತಲಾ 3 ವಿಕೆಟ್ ಪಡೆದರು.
ದ್ವೀತಿಯ ಇನ್ನಿಂಗ್ಸ್ನಲ್ಲಿ 105 ರನ್ಗಳ ಮುನ್ನಡೆಯೊಂದಿಗೆ ಆಟ ಆರಂಭಿಸಿ ಆಸ್ಟ್ರೇಲಿಯಾ ತಂಡದ ಪರ ಮಾರ್ನಸ್ ಲಾಬುಶೇನ್ (70) ಅರ್ಧಶತಕ ಬಾರಿಸಿದರು. ಮತ್ತೊಂದೆಡೆ ಸಂಘಟಿತ ದಾಳಿ ಸಂಘಟಿಸಿದ ಜಸ್ಪ್ರೀತ್ ಬುಮ್ರಾ 5 ವಿಕೆಟ್ ಕಬಳಿಸಿದರು. ಬುಮ್ರಾಗೆ ಉತ್ತಮ ಸಾಥ್ ನೀಡಿದ ಮೊಹಮ್ಮದ್ ಸಿರಾಜ್ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಪರಿಣಾಮ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 234 ರನ್ಗಳಿಗೆ ಆಲೌಟ್ ಆಯಿತು.
339 ರನ್ಗಳ ಗುರಿಯನ್ನು ಬೆನ್ನತ್ತಿದ ಭಾರತ ತಂಡದ ವಿರುದ್ದ ಆರಂಭಿಕ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ 84ರನ್ಗಳನ್ನು ಗಳಿಸಿದ್ದು ಬಿಟ್ಟರೆ. ಉಳಿದ ಯಾವ ಆಟಗಾರರು ನಿರೀಕ್ಷೆಗೆ ತಕ್ಕಂತೆ ಆಡುವಲ್ಲಿ ವಿಫಲರಾದರು. ಪರಿಣಾಮವಾಗಿ ಭಾರತ ತಂಡ 155 ರನ್ಗಳಿಗೆ ಸರ್ವಪತ ಕಂಡು ಸೋಲನುಭವಿಸಿದೆ.