ಬೆಂಗಳೂರು : ಕೆಎಸ್ಡಿಎಲ್ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಅಮೃತ್ ಸಿರಿಯೂರ್ ಎಂದು ಗುರುತಿಸಲಾಗಿದೆ.
ಕೆಎಸ್ಡಿಎಲ್ನ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಮೃತ್ ಸಿರಿಯೂರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿಸೆಂಬರ್ 28ರಂದೆ ಆತ್ಮಹತ್ಯೆ ಮಾಡಿ ಕೊಂಡಿದ್ದು ಇಂದು ಘಟನೆ ಬೆಳಕಿಗೆ ಬಂದಿದೆ. ಕೈನಲ್ಲಿ ಡೆತ್ನೋಟ್ ಹಿಡಿದುಕೊಂಡೆ ಅಮೃತ್ ಆತ್ಮಹತ್ಯೆಗೆ ಶರಣಾಗಿದ್ದು. ಆತ್ಮಹತ್ಯೆಗೆ ಕಾರಣ ಏನು ಎಂದು ಸಂಪೂರ್ಣವಾಗಿ ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ನೇಣು ಬಿಗಿದುಕೊಳ್ಳಲು ಹೋದ ವ್ಯಕ್ತಿ ಹಗ್ಗ ತುಂಡಾಗಿ ಬಿದ್ದು ಸಾ*ವು !
2019ರಲ್ಲಿ ಎರಡನೇ ಮದುವೆಯಾಗಿದ್ದ ಅಮೃತ್ ಖಿನ್ನತೆಗೆ ಒಳಗಾಗಿದ್ದ ಎಂಬುದು ಡೆತ್ ನೋಟ್ನಿಂದ ಬಹಿರಂಗವಾಗಿದ್ದು. ಒಳ್ಳೆಯ ಮಗನಾಗಲಿಲ್ಲ, ಪತ್ನಿಗೆ ಒಳ್ಳೆಯ ಗಂಡನಾಗಲಿಲ್ಲ ಎಂದು ತಮ್ಮ ಸಾವಿಗೆ ಕಾರಣವೇನು ಎಂಬುದನ್ನು ಡಿಟೇಲ್ ಆಗಿ ಉಲ್ಲೇಖ ಮಾಡಿ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಮಹಲಕ್ಷ್ಮೀ ಲೇಔಟ್ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದು. ಡೆತ್ನೋಟ್ ವಶ ಪಡಿಸಿಕೊಂಡು FSLಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.