ಬೆಂಗಳೂರು : ನಗರದ ಪ್ರತಿಷ್ಟಿತ ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ, 50ಕ್ಕೂ ಹೆಚ್ಚು ಬೈಕ್‍ಗಳು ಸುಟ್ಟು ಭಸ್ಮವಾದ ಘಟನೆ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ. ಶಾರ್ಕ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ನಿನ್ನೆ(ಜ.01) ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7 ಗಂಟೆಗೆ ಶೋರೂಂನ ಸಿಬ್ಬಂದಿ ಮನೆಗೆ ತೆರಳಿದ್ದರು. ಇನ್ನೂ 8 ಗಂಟೆ ಸುಮಾರಿಗೆ ಸೆಕ್ಯೂರಿಟಿ ಊಟಕ್ಕೆ ತೆರಳಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಅವಘಡದಿಂದ ಶೋರೂಂನಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಅಲ್ಲದೇ ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್‌ಗೆ ಸಹ ಬೆಂಕಿ ತಗುಲಿದೆ.
ಇದನ್ನೂ ಓದಿ :ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಕಾರ್ ಪಲ್ಟಿ : ಇಬ್ಬರು ಸ್ಥಳದಲ್ಲೆ ಸಾ*ವು !
ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಶದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ ಬೆಂಕಿಯ ಕೆನ್ನಾಲಿಗೆಗೆ ಸುಮಾರು 50 ಬೈಕ್‍ಗಳು ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.