ಬೆಂಗಳೂರು : ಓವರ್ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ಸವಾರರ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ನಡೆದಿದೆ.
ಇಂದು ಮಧ್ಯಹ್ನ 12:20ರ ಸುಮಾರಿಗೆ ನಾಜಿಯಾ ಸುಲ್ತಾನ್ ಹಾಗೂ ನಾಜಿಯಾ ಇರ್ಫಾನ್ ಎಂಬ ಮಹಿಳೆಯರು ಥಣಿಸಂದ್ರ ಮುಖ್ಯ ರಸ್ತೆಯ ಸರಾಯಿಪಾಳ್ಯದ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಬಿಬಿಎಂಪಿಯ ಕಸದ ಲಾರಿಯನ್ನು ಎಡಗಡೆಯಿಂದ ಓವರ್ಟೇಕ ಮಾಡಲು ಹೋಗಿದ್ದಾರೆ. ಆದರೆ ಈ ವೇಳೆ ಮತ್ತೊಂದು ಬೈಕ್ ಅಡ್ಡಬಂದಿದ್ದು. ಆ ಅಪಘಾತವನ್ನು ತಪ್ಪಿಸಿಕೊಳ್ಳುವ ಭರದಲ್ಲಿ ಬಲಕ್ಕೆ ತಿರುವು ಪಡೆದಿದ್ದಾರೆ.
ಇದನ್ನೂ ಓದಿ :ತಂದೆಯ ಕೊಲೆ ಮಾಡಿ , ಹೃದಯಾಘಾತದ ನಾಟಕವಾಡಿದ ಖತರ್ನಾಕ್ ಮಗ !
ಈ ವೇಳೆ ಲಾರಿ ಡಿಕ್ಕಿಯಾಗಿದ್ದು. ಇಬ್ಬರು ಮಹಿಳೆಯರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇಬ್ಬರು ಮಹಿಳೆಯರ ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು. ಹೆಣ್ಣೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.