ಬೆಂಗಳೂರು : ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೂವರು ಆರೋಪಿಗಳಿಗೆ ಬೆಂಗಳೂರಿನ 29ನೇ ACHH ಕೋರ್ಟ್ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ ಎಂದು ಮಾಹಿತಿ ಬಂದಿದೆ.
ಬೆಂಗಳೂರಿನ ನೆಲೆಸಿದ್ದ ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ (34) ಡಿಸೆಂಬರ್ 9ರಂದು ಮಾರತ್ಹಳ್ಳಿಯ ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಸುದೀರ್ಘ ಡೆತ್ನೋಟ್ ಬರೆದಿಟ್ಟು, ಆತ್ಮಹತ್ಯೆಗೆ ಶರಣಾಗಿದ್ದರು. ಅತುಲ್ ಸುಭಾಷ್ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನನ್ವಯ ಆತನ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ, ಬಾಮೈದ ಅನುರಾಗ್ ಸಿಂಘಾನಿಯಾ ಹಾಗೂ ಸಂಬಂಧಿ ಸುಶೀಲ್ ಸಿಂಘಾನಿಯಾ ವಿರುದ್ಧ ಭಾರತೀಯ ನ್ಯಾಯಸಂಹಿತೆ ಅಡಿಯಲ್ಲಿ ಮಾರತ್ಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.
ಇದನ್ನೂ ಓದಿ :ಚಹಲ್-ಧನಶ್ರೀ ದಾಂಪತ್ಯ ಜೀವನದಲ್ಲಿ ಬಿರುಕು : ಡಿವೋರ್ಸ್ಗೆ ಮುಂದಾದ ದಂಪತಿಗಳು ?
ಬಳಿಕ ಹರಿಯಾಣದ ಗುರುಗ್ರಾಮದಲ್ಲಿ ನಿಖಿತಾ ಸಿಂಘಾನಿಯಾ, ಹಾಗೂ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಅವರ ತಾಯಿ ನಿಶಾ ಸಿಂಘಾನಿಯಾ, ಅನುರಾಗ್ ಸಿಂಘಾನಿಯಾರನ್ನ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.
ಇದೀಗ ಈ ಪ್ರಕರಣದ ಮೂವರು ಆರೋಪಿಗಳಿಗೆ ಬೆಂಗಳೂರಿನ 29ನೇ ACHH ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ ಎಂದು ಮಾಹಿತಿ ದೊರೆತಿದೆ.